ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಿದ್ದು ಆಪ್ತ ಪುಟ್ಟಸ್ವಾಮಿ 7 ರಂದು ಕೆಜೆಪಿ ಸೇರ್ಪಡೆ

Rashmi Kasaragodu
Updated On : 5 Apr 2013, 12:04 pm

ಕನ್ನಡಪ್ರಭ ವಾರ್ತೆ೤ ಹಾಸನ೤ ಏ. 4
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿ ಕೊಂಡಿರುವ ನಿವೃತ್ತ ಅಧಿಕಾರಿ ಕೆ.ಎಂ. ಪುಟ್ಟಸ್ವಾಮಿ ಏಪ್ರಿಲ್ 7 ರಂದು ಕೆಜೆಪಿ ಸೇರ್ಪಡೆಯಾಗಲಿದ್ದಾರೆ. ಅಂದು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ  ಯಡಿಯೂರಪ್ಪನವರ ಸಮ್ಮುಖದಲ್ಲಿ ಕೆಜೆಪಿ ಸೇರಿ, ಆ ಪಕ್ಷದ ಟಿಕೆಟ್ ಪಡೆದು ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವುದಾಗಿ ಪುಟ್ಚಸ್ವಾಮಿ ಗುರುವಾರ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
ಕಾಂಗ್ರೆಸ್‌ನಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆ ಇದೆ ಎಂದು ಕಾಂಗ್ರೆಸ್ ಸೇರಿದ್ದೆ. ಆದರೆ ಹಿಂದುಳಿದ ವರ್ಗಗಳಿಗೆ ಸೇರಿದ ವ್ಯಕ್ತಿಗೆ ಟಿಕೆಟ್ ನೀಡದೇ ಕಾಂಗ್ರೆಸ್ ತಾರತಮ್ಯ ಎಸಗಿದೆ.
 ಹಾಸನ ಜಿಲ್ಲೆಯಲ್ಲಿ ಹಿಂದುಳಿದ ಜನಾಂಗಕ್ಕೆ ಸೇರಿದ ಒಬ್ಬ ವ್ಯಕ್ತಿಗಾದರೂ ಟಿಕೆಟ್ ನೀಡಿಲ್ಲ. ಇದರಿಂದ ನೊಂದು ಕೆಜೆಪಿ ಸೇರುತ್ತಿದ್ದು, ಇದಕ್ಕೆ ಕ್ಷೇತ್ರದ ಎಲ್ಲಾ ವರ್ಗದವರು ಸಹಮತ ನೀಡಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement