ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಡಿ.ಮಲ್ಲೇಶ್ಗೆ ಟಿಕೆಟ್: ಒತ್ತಾಯ

Rashmi Kasaragodu
Updated On : 5 Apr 2013, 11:21 am

ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದಿಂದ ಡಿ.ಮಲ್ಲೇಶ್ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ ಸಕಲೇಶಪುರ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ಲೋಹಿತ್ ಅವರು, ಇವರ ವಿರುದ್ಧ ರಾಜಕೀಯ ದುರುದುದ್ದೇಶದಿಂದ ಕೆಲವು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.
ಮಲ್ಲೇಶ್ ಕಳೆದ 28 ವರ್ಷಗಳಿಂದ ಕಾಂಗ್ರೆಸ್ನಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ. ಕೆಳಮಟ್ಟದಿಂದ ಪಕ್ಷದ ಸಂಘಟನೆಗೆ ಸಾಕಷ್ಟು ಶ್ರಮಿಸಿದ್ದಾರೆ. ಇವರ ವಿರುದ್ಧದ ಆರೋಪಗಳು ನಿರಾಧಾರ. ಈ ರೀತಿ ದ್ವಂದ್ವ ಹೇಳಿಕೆ ನೀಡುವ ಮೂಲಕ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ನಡಿಗೆ ಜನರ ಬಳಿಗೆ ಕಾರ್ಯವನ್ನು ಮಲ್ಲೇಶ ಹೋಬಳಿಯ ಮಟ್ಟದಲ್ಲಿ  ಬಹಳ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅಲ್ಲದೆ ಎಸ್.ಎಂ.ಕೃಷ್ಣ ಕಾಲಾವಧಿಯಲ್ಲಿ ಬೇಲೂರು ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿ ಅತ್ಯಲ್ಪ ಮತದಿಂದ ಮಲ್ಲೇಶ್ ಸೋತಿದ್ದರು. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುವ ವ್ಯಕ್ತಿಗೆ ಟಿಕೆಟ್ ನೀಡದೇ ಬೇರೆಯವರಿಗೆ ನೀಡಬಾರದು ಎಂದು ಒತ್ತಾಯಿಸಿದರು. ತಾಲೂಕು ಎಸ್ಸಿಎಸ್ಸಿ ಅಧ್ಯಕ್ಷ ದೇವರಾಜ, ನಿಂಗಪ್ಪ, ರೆಹಮತ್ಖಾನ್ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement