ಬಾಬೂಜಿ ಭವನ ನಿರ್ಮಾಣಕ್ಕೆ ಕ್ರಮ
ಕನ್ನಡಪ್ರಭ ವಾರ್ತೆ ಹಾಸನ ಏ 5
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ರಾಮ್ 106ನೇ ಜನ್ಮ ದಿನಾಚರಣೆಯನ್ನು ಶುಕ್ರವಾರ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಇತರೆ ಸಂಘಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸರಳವಾಗಿ ಆಚರಿಸಲಾಯಿತು.
ವಿಧಾನಸಭಾ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿ ಇರುವ ಹಿನ್ನೆಲೆಯಲ್ಲಿ ಸರಳವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೋಹನರಾಜ್ ಅವರು ಡಾ.ಬಾಬು ಜಗಜೀವನ್ರಾಮ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ರು. ನಂತರ ನಾನಾ ಅಧಿಕಾರಿಗಳು ಬಾಬೂಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಜಿಲ್ಲಾಧಿಕಾರಿ ಮೋಹನ್ರಾಜ್ ಮಾತನಾಡಿ, ಡಾ.ಬಾಬು ಜಗಜೀವನ್ರಾಮ್ ಅವರು ದೇಶಕ್ಕಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಗರದಲ್ಲಿ ಡಾ.ಬಾಬು ಜಗಜೀವನ್ರಾಮ್ ಭವನ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಚುನಾವಣೆ ನಂತರ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಗಜೀವನ್ರಾಮ್ ಭವನ ನಿರ್ಮಾಣಕ್ಕಾಗಿ ಸಾಕಷ್ಟು ಪತ್ರಗಳು ಬಂದಿದ್ದು, ಅದಕ್ಕಾಗಿ ಜಾಗವನ್ನು ಗುರುತಿಸಲಾಗಿದೆ ಎಂದ ಅವರು, ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಯಾವುದೇ ರೀತಿ ಸಭೆ ಸಮಾರಂಭ ನಡೆಸುವಂತಿಲ್ಲ. ಪ್ರಯುಕ್ತ ಬಾಬೂಜಿ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಆದ್ದರಿಂದ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
ನಂತರ ಜಿಲ್ಲಾಧಿಕಾರಿ ಅವರು ಭವನ ನಿರ್ಮಾಣಕ್ಕೆ ಸಾಕಷ್ಟು ಬಾರಿ ಮನವಿ ಹಾಗೂ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಜೊತೆಯಲ್ಲಿ ಭವನ ನಿರ್ಮಾಣ ಬಗ್ಗೆ ಚರ್ಚಿಸಿದರು. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ ಎಂದು ಹೋರಾಟಗಾರರಿಗೆ ಸ್ಪಷ್ಟಪಡಿಸಿದರು.
ಹಿಂದಿನ ಜಿಲ್ಲಾಧಿಕಾರಿಯವರು ಜಗಜೀವನ್ರಾಮ್ ಭವನ ನಿರ್ಮಾಣಕ್ಕೆ ಸಾಕಷ್ಟು ಪ್ರಯತ್ನಿಸಿದ್ದಾರೆ. ಅದೇ ರಂತೆ ನಾನೂ ಕೂಡ ಪ್ರಾಮಾಣಿಕವಾಗಿ ಭವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ಸಿಂಗ್, ಹೆಚ್ಚವರಿ ಜಿಲ್ಲಾಧಿಕಾರಿ ಗೋಪಾಲಕೃಷ್ಣ, ಉಪ ವಿಭಾಗಾಧಿಕಾರಿ ಜಗದೀಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಾಗರಾಜು, ತಾಲೂಕು ಅಧಿಕಾರಿ ಪುರುಷೋತ್ತಮ್ ಇತರರು ಇದ್ದರು.
ಡಾ.ಬಾಬು ಜಗಜೀವನ್ರಾಮ್ ಅವರು ದೇಶಕ್ಕಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಗರದಲ್ಲಿ ಡಾ.ಬಾಬು ಜಗಜೀವನ್ರಾಮ್ ಭವನ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಚುನಾವಣೆ ನಂತರ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು
ಟಿ ಮೋಹನರಾಜ್
ಜಿಲ್ಲಾಧಿಕಾರಿ