ಶ್ರವಣಬೆಳಗೊಳದಿಂದ ಪಕ್ಷೇತರ ಅಭ್ಯರ್ಥಿ ಸ್ಪರ್ಧೆ
ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ಯುವ ಅಭ್ಯರ್ಥಿ ಜಿ.ಬಿ.ಅರ್ಜುನ್ ಕುಮಾರ್ ತಿಳಿಸಿದ್ದಾರೆ.
ಕಸಬಾ ಹೋಬಳಿಯ ಡಿ.ಕಾಳೇನಹಳ್ಳಿ ಕ್ಷೇತ್ರದ ಜಿಪಂ ಮಾಜಿ ಸದಸ್ಯೆ ಸುಧಾಮಣಿ ಪುತ್ರನಾದ ನಾನು ತಾಂತ್ರಿಕ ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಈ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿ ನೀರಿನ ಸಮಸ್ಯೆ, ನಿರುದ್ಯೋಗ ನಿರ್ಮೂಲನೆ ಗುರಿಯನ್ನಾಗಿಸಿಕೊಂಡು ಕಣಕ್ಕಿಳಿದಿದ್ದೇನೆ ಎಂದರು.
ಕಳೆದ ಒಂದು ವರ್ಷದಿಂದ ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಕ್ಷೇತ್ರದಲ್ಲಿ ಹೊಸ ಬದಲಾವಣೆ ತರುವ ಹಾಗೂ ಭ್ರಷ್ಟಾಚಾರ ನಿರ್ಮೂಲನೆಯಾಗಿ ಸ್ಪರ್ಧಿಸುತ್ತಿದ್ದು, ಮತದಾರರು ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ತಾಯಿ ಸುಧಾಮಣಿ, ಸಹೋದರ ಅನಿಲ್ಕುಮಾರ್, ಪ್ರಕಾಶ್, ಸೋಮಶೇಖರ್ ಇದ್ದರು.