ವಿಶ್ವ ಆರೋಗ್ಯ ದಿನಾಚರಣೆ ಇಂದು
ಹಾಸನ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶ್ರೀ ಚಾಮರಾಜೇಂದ್ರ ಆಸ್ಪತ್ರೆ ಆಶ್ರಯದಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಭಾಂಗಣದಲ್ಲಿ ಏಪ್ರಿಲ್ 7ರಂದು ಬೆಳಗ್ಗೆ 10.30ಕ್ಕೆ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಎಲ್.ಶ್ಯಾಮಲಾದೇವಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೆ.ಶಂಕರ್ ಅಧ್ಯಕ್ಷತೆ ವಹಿಸುವರು.