ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜಿಲ್ಲೆಯ 7 ಕ್ಷೇತ್ರಗಳಲ್ಲೂ ರೈತಸಂಘ ಸ್ಪರ್ಧೆ: ಶ್ರೀಕಂಠ ದೊಡ್ಡೇರಿ

Rashmi Kasaragodu
Updated On : 9 Apr 2013, 12:00 pm

ಕನ್ನಡಪ್ರಭ ವಾರ್ತೆ೤ ಹಾಸನ೤ ಏ. 8
ರೈತಸಂಘ ರಾಜಕೀಯ ಶಕ್ತಿಯಾಗಿ ಮೂಡಲು ವಿಧಾನಸಭೆ ಚುನಾವಣೆಯಲ್ಲಿ ರೈತ ಸಂಘದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ರಾಜ್ಯ ರೈತ ಸಂಘದ ಮುಖಂಡ ಶ್ರೀಕಂಠ ದೊಡ್ಡೇರಿ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಸಿಪಿಎಂ, ಸಿಪಿಐ, ಸರ್ವೋದಯ ಕರ್ನಾಟಕ ಪಕ್ಷದ ಅಧ್ಯಕ್ಷ ದೇವನೂರು ಮಹದೇವ್, ಜೆಡಿಯು ಹಾಗೂ ಇತರೆ ಸಂಘಟನೆಗಳು ಒಟ್ಟಾಗಿ ಸ್ಪರ್ಧಿಸಲಿದೆ. ಯಾರನ್ನು ಕಣಕ್ಕಿಳಿಸಬೇಕು ಎಂಬುದನ್ನು ತೀರ್ಮಾನಿಸಿ ಒಂದೆರಡು ದಿನಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ರೈತ ಸಂಘದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ ಹಾಗೂ ಅರಸೀಕೆರೆ ಅಭ್ಯರ್ಥಿಗಳು ಸಿದ್ದರಾಗಿದ್ದಾರೆ. ಒಂದೊಂದು ಕ್ಷೇತ್ರದಿಂದ ಇಬ್ಬಿಬ್ಬರು ಅಭ್ಯರ್ಥಿಗಳ ಹೆಸರಿದ್ದು, ಕೂಡಲೇ ಅದನ್ನು ಅಂತಿಮಗೊಳಿಸಲಾಗುತ್ತದೆ. ರೈತರ ಪರ ಕೆಲಸ ಮಾಡುವ ನಮ್ಮ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡಿದರು. ರೈತ ಸಂಘದ ರಾಜ್ಯ ಉಪಾಧ್ಯಕ್ಷ ರಾಮು ಮಾತನಾಡಿ,  ತಾಲೂಕು ಹಾಗೂ ಜಿಲ್ಲಾ ಸಮಿತಿಯಲ್ಲಿ ತೀರ್ಮಾನಿಸಿ ಕಳುಹಿಸಿದಂತಹ ಹೆಸರನ್ನೇ ರಾಜ್ಯ ಸಮಿತಿ ಅಂತಿಮಗೊಳಿಸಲಾಗುತ್ತದೆ ಎಂದರು. ಹೊಳೆನರಸೀಪುರ ತಾಲೂಕು ರೈತ ಸಂಘದ ಅಧ್ಯಕ್ಷರಾಗಿ ಪುಟ್ಟರಾಜುರನ್ನು ಆಯ್ಕೆ ಮಾಡಲಾಗಿದೆ ಎಂದರು. ರಾಜ್ಯ ಉಪಾಧ್ಯಕ್ಷ ರಾಮಸ್ವಾಮಿ, ಜಿಲ್ಲಾಧ್ಯಕ್ಷ ನಿಂಗೇಗೌಡ, ಸುರೇಶ್ಬಾಬು ಲಕ್ಷ್ಮೇಗೌಡ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement