ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

13ಕ್ಕೆ ಸರ್ಕಾರಿ ನೌಕರರ ಸಂಘದ ಸಭೆ ಆಯೋಜನೆ

Rashmi Kasaragodu
Updated On : 10 Apr 2013, 12:18 pm

ಹಾಸನ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಜಾರಿಗೆ ತಂದಿರುವ ನೂತನ ಪಿಂಚಣಿ ಯೋಜನೆ (ಎನ್.ಪಿ.ಎಸ್) ಯಿಂದಾಗಿ ಲಕ್ಷಾಂತರ ಸರ್ಕಾರಿ ನೌಕರರಿಗೆ ನಿವೃತ್ತಿ ವೇತನದ ಭದ್ರತೆ ಇಲ್ಲದಂತಾಗಿದ್ದು, ಈ ಕುರಿತು ಚರ್ಚಿಸಲು ಏ.13 ರಂದು ಬೆಳಗ್ಗೆ 11ಕ್ಕೆ ನಗರದ ಶ್ರೀನಿವಾಸ ಕಲ್ಯಾಣ ಮಂಟಪದ ಬಳಿ ಇರುವ ಸಿಐಟಿಯು ಕಚೇರಿಯಲ್ಲಿ ಸರ್ಕಾರಿ ನೌಕರರ ಸಭೆ ಕರೆಯಲಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಜೆ.ಚಂದ್ರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರ ಈಗಾಗಲೇ 2006ರ ಏ.1 ರಿಂದ ರಾಜ್ಯ ಸರ್ಕಾರದ ಕೆಲಸಕ್ಕೆ ಸೇರಿದ ನೌಕರರನ್ನು ಈ ನೂತನ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಸೇರಿಸಿದ್ದು ಸಾವಿರಾರು ಸರ್ಕಾರಿ ನೌಕರರ ಹಣವನ್ನು ಈ ಪಿಂಚಣಿ ಯೋಜನೆಯ ಸಲುವಾಗಿ ಕಟಾವು ಮಾಡಿದ್ದು ಮಾತ್ರವಲ್ಲದೆ ನೌಕರರ ಸಂಬಳದ ಹಣವನ್ನು ಷೇರು ಮಾರುಕಟ್ಟೆ ವ್ಯವಹಾರದಲ್ಲಿ ತೊಡಗಿಸಿರುವುದರ ಪರಿಣಾಮ ನೌಕರರ ಹಣಕ್ಕೆ ಯಾವುದೇ ಖಾತ್ರಿ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.
ನೌಕರ ವಿರೋಧಿಯಾಗಿರುವ ಈ ಹೊಸ ಪಿಂಚಣಿ ಯೋಜನೆಯ ವಿರುದ್ಧ ದೇಶದ ಎಲ್ಲಾ ಭಾಗಗಳಲ್ಲೂ ಸರ್ಕಾರಿ ನೌಕರರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು ಹಲವಾರು ಹೋರಾಟಗಳನ್ನು ನಡೆಸಿದ್ದಾರೆ. ಇದರ ಭಾಗವಾಗಿಯೇ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಹಲವಾರು ಹೋರಾಟಗಳನ್ನು ನಡೆಸಿದ್ದರೂ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಬೇಕಾಗಿದೆ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರ ಮಧ್ಯೆ ಇನ್ನಷ್ಟು ಜಾಗೃತಿ ಮೂಡಿಸುವ ಮತ್ತು ಹೋರಾಟವನ್ನು ಮತ್ತಷ್ಟು ಹೆಚ್ಚು ಮಾಡುವ ದೃಷ್ಟಿಯಿಂದ ಈ ಕುರಿತು ಚರ್ಚಿಸುವ ಸಲುವಾಗಿ ನೂತನ ಪಿಂಚಣಿ ಯೋಜನೆ ವ್ಯಾಪ್ತಿಗೆ ಸೇರಿರುವ ಸರ್ಕಾರಿ ನೌಕರರ ಸಭೆಯನ್ನು ಕರೆಯಲಾಗಿದ್ದು ಸರ್ಕಾರಿ ನೌಕರರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಸಲಹೆ ಸಹಕಾರ ನೀಡಬೇಕೆಂದು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement