ತಾಲೂಕು ಬಿಜೆಪಿಗೆ ಶ್ರೀನಿವಾಸ್ ರಾಜಿನಾಮೆ
ಕ.ಪ್ರ. ವಾರ್ತೆ ಬೇಲೂರು ಏ.9
ತಾಲೂಕು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಗೆಂಡೇಹಳ್ಳಿ ಶ್ರೀನಿವಾಸ್ ತಿಳಿಸಿದರು.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕು ಭಾರತೀಯ ಜನತಾ ಪಕ್ಷದ ಮಂಡಲ ಉಪಾಧ್ಯಕ್ಷನಾಗಿ ಕೆಲಸ ನಿರ್ವಹಿಸಿದ್ದು, ಪ್ರಸ್ತುತ ಸಂದರ್ಭದಲ್ಲಿ ಬಿಜೆಪಿಯಲ್ಲಿ ಗೊಂದಲ ಆಂತರಿಕ ಕಚ್ಚಾಟ ಹಾಗೂ ಕಾರ್ಯಕರ್ತರ ಕಡೆಗಣನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ನನ್ನ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದರು. ಬಿಜೆಪಿ ಪಕ್ಷದಲ್ಲಿ ವಿಧಾನಸಭಾ ಚುನಾವಣೆಗೆ ರೀಯಲ್ ಎಸ್ಟೇಟ್ ದಂಧೆ ನಡೆಸುತ್ತಿರುವವರಿಗೆ ಟಿಕೆಟ್ ನೀಡಲಾಗಿದೆ. ಸಕ್ರಿಯ ಕಾರ್ಯಕರ್ತರನ್ನು ಮೂಲೆಗುಂಪು ಮಾಡುತ್ತಿರುವ ಬಿಜೆಪಿ ಮುಖಂಡರು ಕಾರ್ಯಕರ್ತರ ಬಗ್ಗೆ ಚಿಂತನೆ ನಡೆಸದೆ ಇರುವುದು ವಿಷಾದನೀಯ ಎಂದರು. ಈ ಹಿಂದೆ ಬಿಜೆಪಿ ಮುಖಂಡರಾಗಿದ್ದ ಬಿ.ಶಿವರುದ್ರಪ್ಪ ಪಕ್ಷದಲ್ಲಿ ಒಡಕು ಉಂಟು ಮಾಡಿ ಇಂದು ಕೆಜೆಪಿ ಸೇರಿದ್ದಾರೆ ಎಂದು ತಿಳಿಸಿದರು.