ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಾಂಗ್ರೆಸ್, ಬಿಜೆಪಿಯಿಂದ ರಾಜ್ಯಕ್ಕೆ ಅನ್ಯಾಯ: ರೇವಣ್ಣ

Mainashree
Updated On : 11 Apr 2013, 12:49 pm

ಕನ್ನಡಪ್ರಭವಾರ್ತೆ  ಚನ್ನರಾಯಪಟ್ಟಣ  ಏ.10
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಯಿಂದ ರಾಜ್ಯಕ್ಕೆ ಘೋರ ಅನ್ಯಾಯವಾಗಿದೆ ಎಂದು ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೋಪಿಸಿದರು.
ತಾಲೂಕಿನ ಹೊನ್ನಶೆಟ್ಟಿಹಳ್ಳಿಯಲ್ಲಿ ದಂಡಿಗನಹಳ್ಳಿ ಹೋಬಳಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ತಮಿಳುನಾಡಿನ ಕರುಣಾನಿಧಿ ಮತ್ತು ಬಿಜೆಪಿಯವರು ಜಯಲಲಿತಾ ಅವರನ್ನು ಓಲೈಸಲು ರಾಜ್ಯಕ್ಕೆ ಸತತವಾಗಿ ಅನ್ಯಾಯ ಮಾಡುತ್ತಿದ್ದಾರೆ. ಇದಕ್ಕೆ ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಬಂದೊದಗಿರುವ ದುಃ ಸ್ಥಿತಿಯೇ ತಾಜಾ ಉದಾಹರಣೆ ಎಂದರು.
ಕಾವೇರಿ ಕಣಿವೆಯಲ್ಲಿ ಪ್ರಸ್ತುತ ಕುಡಿಯುವ ನೀರಿಗೂ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಈ ವಿಷಯದಲ್ಲಿ ರಾಷ್ಟ್ರೀಯ ಪಕ್ಷಗಳೇಕೆ ಜನರ ಪರವಾಗಿ ಹೋರಾಟಕ್ಕೆ ಮುಂದಾಗಿಲ್ಲ ಎಂದು ಪ್ರಶ್ನಿಸಿದರು.
ಕಾಚೇನಹಳ್ಳಿ ಏತ ನೀರಾವರಿ ಯೋಜನೆಗೆ ಎಚ್.ಡಿ.ಕುಮಾರಸ್ವಾಮಿ ಅಧಿಕಾರಾವಧಿಯಲ್ಲಿ 200 ಕೋಟಿ ರು.ಗೆ  ಅನುಮೋದನೆ ದೊರೆತಿತ್ತು. ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿ ಕೆಲವರು ಪ್ರತಿಭಟನೆಯ ನಾಟಕವಾಡಿ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ದೂರಿದರು.
ದಂಡಿಗನಹಳ್ಳಿ ಹೋಬಳಿ ಶಾಶ್ವತ ಕುಡಿಯುವ ನೀರು ಒದಗಿಸುವ 45 ಕೋಟಿ ರು. ವೆಚ್ಚದ ಯೋಜನೆಗೆ ಅನುಮೋದನೆಗೆ ದೊರೆತಿದ್ದು, ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಹೋಬಳಿಗೆ ಅಗತ್ಯವಾದ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ಮತದಾರರು ಅಪಪ್ರಚಾರಕ್ಕೆ ಕಿವಿಗೊಡದೆ ಜೆಡಿಎಸ್‌ಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
  ಜಿಪಂ ಸದಸ್ಯೆ ಕವಿತಾ ಪ್ರಕಾಶ್, ಜಿಪಂ ಮಾಜಿ ಸದಸ್ಯ ಕೃಷ್ಣೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಬಳದಾರೆ ಅಶೋಕ್, ನಾಡನಹಳ್ಳಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪುಟ್ಟಸ್ವಾಮಿಗೌಡ, ಬಿಬಿ ಕುಂಬೇನಹಳ್ಳಿ, ಆನೆಕೆರೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಮೊದಲಾದವರು ಇದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement