ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕೆಜೆಪಿ ಕಾರ್ಯಕರ್ತರ ಸಭೆಯಲ್ಲಿ ಗದ್ದಲ

Mainashree
Updated On : 11 Apr 2013, 12:49 pm

ಕನ್ನಡಪ್ರಭ ವಾರ್ತೆ  ಆಲೂರು  ಏ.10
ಕೆಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸಮಿತಿ ರಚಿಸದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಮುಖಂಡರು ಮತ್ತು ಕಾರ್ಯಕರ್ತರು ಸಭೆ ಬಹಿಷ್ಕರಿಸಿ, ಮುಖಂಡರ ವಿರುದ್ಧ ಘೋಷಣೆ ಕೂಗಿದ ಘಟನೆ ಮಂಗಳವಾರ ಇಲ್ಲಿ ನಡೆದ ಕೆಜೆಪಿ ಸಮಾವೇಶದಲ್ಲಿ ನಡೆಯಿತು.
ತಾಪಂ ಮಾಜಿ ಅಧ್ಯಕ್ಷ ಕಬ್ಬಿನಹಳ್ಳಿ ಜಗದೀಶ್, ಹುಣಸವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಯಡೂರು ಪ್ರಕಾಶ್, ಅಜಿತ್, ಬೈರ ಗ್ರಾಪಂ ಮಾಜಿ ಅಧ್ಯಕ್ಷ ಕಾಂತರಾಜ್ ಸೇರಿದಂತೆ ಹಲವಾರು ಮಂದಿ  ಕಾರ್ಯಕರ್ತರು ಸಭೆ ಬಹಿಷ್ಕರಿಸಿ ಹೊರನಡೆದು, ಘೋಷಣೆ ಕೂಗಿದರು. ಈ ಸಮಯದಲ್ಲಿ ಗದ್ದಲ ಉಂಟಾಯಿತು.
ನಂತರ ಮಾತನಾಡಿದ ಪ್ರತಿಭಟನಾಕಾರರು, ಪಟ್ಟಣ ಪಂಚಾಯ್ತಿ ಚುನಾವಣೆ ವೇಳೆ ನಿಷ್ಠೆಯಿಂದ ದುಡಿದವರನ್ನು ಕಡೆಗಣಿಸಿ, ಅಭ್ಯರ್ಥಿ ಸೋಲಿಸಲು ಕೆಲಸ ಮಾಡಿದ ಪಕ್ಷ ವಿರೋಧಿಗಳಿಗೆ ಮನ್ನಣೆ ನೀಡುತ್ತಿದ್ದಾರೆ. ಬಿ.ಆರ್. ಗುರುದೇವ್ ಅವರು ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಎಚ್.ಕೆ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಲು ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಕ್ಷೇತ್ರದ ಟಿಕೆಟ್ ಅನ್ನು ಲಕ್ಷಾಂತರ ರು. ಗೆ ಮಾರಾಟವಾಗಿದ್ದು, ಅದರ ಋಣ ತೀರಿಸಲೆಂದೇ ಗುರುದೇವ್ ಈ ರೀತಿ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಅಲ್ಲದೆ ಬಿಜೆಪಿಯಲ್ಲೇ ಇರುವ ಜಿಪಂ ಸದಸ್ಯೆ ಜ್ಯೋತಿ ಗುರುದೇವ್ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ನಾರಾಯಣಸ್ವಾಮಿ ಪರ ಕೆಲಸ ಮಾಡುವುದನ್ನು ಬಿಟ್ಟು ಇಲ್ಲಿ ಕೆಜೆಪಿ ಪಕ್ಷದ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುತ್ತಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement