ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಿಜೆಪಿ ಮಂಡಲ ಕಾರ್ಯಕರ್ತರ ಕಾರ್ಯಾಗಾರ

Mainashree
Updated On : 11 Apr 2013, 12:49 pm

ಕನ್ನಡಪ್ರಭ ವಾರ್ತೆ  ಬೇಲೂರು  ಏ.10
  224 ಕ್ಷೇತ್ರಗಳನ್ನು ಸಮನಾಗಿ ನೋಡಿ, ಅವುಗಳ ಅಭಿವೃದ್ಧಿಯತ್ತ ಗಮನಹರಿಸಿದ ಏಕೈಕ ಪಕ್ಷವೆಂದರೆ ಅದು ಬಿಜೆಪಿಯಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರದಲ್ಲಿರುವಾಗ ಸರ್ಕಾರ ಉರುಳಿಸಲು ಹಲವು ಪ್ರಯತ್ನ ಮಾಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನವಿಲೆ ಅಣ್ಣಪ್ಪ ತಿಳಿಸಿದರು.
 ಬಿಜೆಪಿ ಮಂಡಲ ಕಾರ್ಯಕರ್ತರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಹಲವು ವರ್ಷಗಳಿಂದ ವಿರೋಧ ಪಕ್ಷದಲ್ಲಿದ್ದು, ಆಡಳಿತ ಪಕ್ಷದ ವೈಫಲ್ಯವನ್ನು ಜನರ ಮುಂದೆ ಇಡುವ ಮೂಲಕ ಚುನಾವಣೆಯನ್ನು ಎದುರಿಸುತ್ತಿದ್ದು ಈ ಬಾರಿ ಆಡಳಿತ ಪಕ್ಷದಲ್ಲಿರುವುದರಿಂದ ಅಭಿವೃದ್ಧಿ ಆಗಿರುವುದನ್ನು ಮತದಾರರಿಗೆ ತಿಳಿಸಿ ಮತ ಪಡೆಯಬೇಕಾಗಿದೆ ಎಂದು ತಿಳಿಸಿದರು.
 ಬೇಲೂರು ವಿಧಾನಸಭಾ ಅಭ್ಯರ್ಥಿ ಇ.ಎಚ್.ಲಕ್ಷ್ಮಣ್ ಜಯಗಳಿಸುವಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ಹೇಳಿದರು.
 ಕಾರ್ಯಾಗಾರದಲ್ಲಿ ರಾಜ್ಯ ಸಮಿತಿ ಸದಸ್ಯ ಸಿದ್ದರಾಜು, ಮೈಸೂರು ವಿಭಾಗ ಸಂಘಟನಾ ಕಾರ್ಯದರ್ಶಿ ಸುರೇಶ ಬಾಬು, ಜಿಲ್ಲಾಧ್ಯಕ್ಷ ಕೃಷ್ಣೇಗೌಡ, ತಾಲೂಕು ಅಧ್ಯಕ್ಷ ರೇಣುಕುಮಾರ್, ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್, ಎಚ್. ಎಲ್. ಮೋಹನ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement