ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡದಿರಲು ದಸಂಸ ತೀರ್ಮಾನ

Vishwanath S
Updated On : 12 Apr 2013, 9:16 am

ಕ.ಪ್ರ.ವಾರ್ತೆ, ಸಕಲೇಶಪುರ, ಏ.12
ರಾಜ್ಯ ದಲಿತ ಸಂಘರ್ಷ ಸಮಿತಿ ನಿರ್ದೇಶನದಂತೆ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡದಿರಲು ತೀರ್ಮಾನಿಸಲಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಹಾಡ್ಲಹಳ್ಳಿ ಜಗದೀಶ್ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಜ್ಯ ದಲಿತ ಸಂಘರ್ಷ ಸಮಿತಿ ಸಭೆಯಲ್ಲಿ ನಿರ್ಣಯಿಸಿದಂತೆ ಕಾಂಗ್ರೆಸ್ ಪಕ್ಷದಿಂದ ದಲಿತ ಅಭ್ಯರ್ಥಿ ಮುಖ್ಯಮಂತ್ರಿಯಾಗುವ ಸಂಭವ ಹೆಚ್ಚಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ರಾಜ್ಯದೆಲ್ಲೆಡೆ ದಸಂಸ ಬೆಂಬಲ ನೀಡಬೇಕು ಎಂಬ ತೀರ್ಮಾನಕ್ಕೆ ಬರಲಾಗಿತ್ತು.
ಆದರೆ ಸಕಲೇಶಪುರ-ಆಲೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ಯಕ್ಷೇತ್ರದವರಾಗಿದ್ದು, ದಲಿತರ ಪರ ಯಾವುದೇ ಹೋರಾಟ ಮಾಡದೆ ಇರುವುದರಿಂದ ಇವರ ಬದಲಿಗೆ ಸ್ಥಳೀಯ ಅಭ್ಯರ್ಥಿಗೆ ಬೆಂಬಲ ನೀಡಲು ಸಮಿತಿ
ನಿರ್ದೇಶನ ನೀಡಿದೆ. ಅದರಂತೆ ಏ.15 ರಂದು ದಸಂಸ ಪದಾಧಿಕಾರಿಗಳ ಸಭೆ ನಡೆಸಿ ಯಾರಿಗೆ ಬೆಂಬಲ ನೀಡುವುದು ಎಂಬ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement