ನಾಳೆ ಡಾ. ಅಂಬೇಡ್ಕರ್ ಜನ್ಮ ದಿನಾಚರಣೆ
ಹಾಸನ: ಡಾ. ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಏ.14ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ನಂತರ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕಚೇರಿ, ಅಂಬೇಡ್ಕರ್ ಭವನದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜನ್ಮ ದಿನಾಚರಣೆ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೋಪಾಲಕೃಷ್ಣ ತಿಳಿಸಿದ್ದಾರೆ.
ಬೇಲೂರಿನಲ್ಲಿ ಅಂದು ಬೆಳಗ್ಗೆ 9.30ಕ್ಕೆ ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ತಾಲ್ಲೂಕು ಪಂಚಾಯತಿಯ ವೀಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜನ್ಮ ದಿನಾಚರಣೆ ಆಚರಿಸಲಾಗುವುದು. ಸಾರ್ವಜನಿಕರು, ಸಂಘಸಂಸ್ಥೆ ಪದಾಧಿಕಾರಿಗಳು, ಅಧಿಕಾರಿಗಳು, ನೌಕರರು ಭಾಗವಹಿಸಬೇಕೆಂದು ತಹಸೀಲ್ದಾರರು ಕೋರಿದ್ದಾರೆ.