ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಲು ಮುತುವರ್ಜಿ: ಅಧ್ಯಕ್ಷೆ

Mainashree
Updated On : 13 Apr 2013, 11:32 am

ಕನ್ನಡಪ್ರಭ ವಾರ್ತೆ೤ ಹಾಸನ೤ ಏ 13
ಪಕ್ಷವನ್ನು ಸಂಘಟಿಸುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಪಡೆಯಲು  ಶ್ರಮಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಬಿ.ಕೆ.ಚಂದ್ರಕಲಾ ಹೇಳಿದರು.
  ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧ್ಯಕ್ಷ ಬಿ.ಶಿವರಾಂ ಸ್ಪರ್ಧಿಸುತ್ತಿರುವುದರಿಂದ ಪಕ್ಷ ಸಂಘಟನೆಗೆ ತೊಂದರೆಯಾಗುವುದರಿಂದ ಜಿಲ್ಲಾಧ್ಯಕ್ಷರ ಜವಾಬ್ದಾರಿಯನ್ನು ನನಗೆ ವಹಿಸಿದ್ದು, ಅದನ್ನು ಜವಾಬ್ದಾರಿಯಿಂದ ನಿಭಾಯಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲು ಶ್ರಮಿಸಲಾಗುತ್ತದೆ.
  ನನಗೆ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ವಿಶ್ವಾಸ ಹೊಂದಿರುವುದಾಗಿ ಹೇಳಿದರು.
 ಬೇಲೂರು ವಿಧಾನಸಭಾ ಕ್ಷೇತ್ರದಿಂದ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಹೈಕಮಾಂಡ್ ಹಾಲಿ ಶಾಸಕರಿಗೆ ಟಿಕೆಟ್ ಎಂಬ ಮಾನದಂಡ ಅನುಸರಿಸಿದ ಹಿನ್ನೆಲೆಯಲ್ಲಿ ಟಿಕೆಟ್ ಕೈ ತಪ್ಪಿತು.  ಆದರೆ ಸಾಮಾಜಿಕ  ನ್ಯಾಯದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ನನಗೆ ಜಿಲ್ಲಾಧ್ಯಕ್ಷೆ ಸ್ಥಾನ ನೀಡಿದ್ದಾರೆ ಎಂದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿಸಿದರು.
 ಬಿಜೆಪಿ ನಾಯಕರು ಭ್ರಷ್ಟಚಾರದಲ್ಲಿ ತೊಡಗಿದ ಪರಿಣಾಮ ರಾಜಿನಾಮೆ ನೀಡಬೇಕಾದ ಪರಿಸ್ಥಿತಿ ಬಂದಿತು.ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ಜನತೆ ಇದೀಗ ಕಾಂಗ್ರೆಸ್‌ನಿಂದ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂಬ ಭಾವನೆ ಹೊಂದಿದ್ದಾರೆ ಎಂದರು.
 ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ಜನ ಪರ್ಯಾಯವಾಗಿ ಕಾಂಗ್ರೆಸ್ ಕಡೆಗೆ ನೋಡುತ್ತಿದ್ದಾರೆ. ಪಕ್ಷ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪಕ್ಷದಲ್ಲಿ ಬಂಡಾಯ  ಇಲ್ಲ. ಆಕಾಂಕ್ಷಿಗಳಲ್ಲಿ ಸಹಜವಾಗಿಯೇ ಪೈಪೋಟಿ ಇರುತ್ತದೆ.
  ಆದರೆ ಬಿ ಫಾರಂ ನೀಡಿದ ಬಳಿಕ ಅವೆಲ್ಲವನ್ನು  ಬದಿಗಿರಿಸಿ ಅಧಿಕೃತ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.ಮುಖಂಡರಾದ ಮುನಿಸ್ವಾಮಿ, ಮರ್ಕುಲಿ ಗೋಪಾಲಗೌಡ, ಯತೀಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement