ಸಕಲೇಶಪುರ ಕ್ಷೇತ್ರ ಟಿಕೆಟ್ ಆಕಾಂಕ್ಷಿ: ಕಾಂಗ್ರೆಸ್ ಮುಖಂಡ ಎಂ.ಡಿ.ಸ್ವಾಮಿ
ಕನ್ನಡಪ್ರಭ ವಾರ್ತೆ ಹಾಸನ ಏ 13
ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿ ಕಾಂಗ್ರೆಸ್ ಮುಖಂಡ ಎಂ.ಡಿ.ಸ್ವಾಮಿ ತಿಳಿಸಿದರು.ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಮಲ್ಲೇಶ್ ಅವರಿಗೆ ಟಿಕೆಟ್ ನೀಡುವುದಾಗಿ ಹೇಳಿದ ಪಕ್ಷದ ಹೈಕಮಾಂಡ್ ನಿರ್ಣಯ ಖಂಡನೀಯವಾದ್ದು. ಬರುವ ವಿಧಾನಸಭಾ ಚುನಾವಣೆಯಲ್ಲಿ ಸಕಲೇಶಪುರ ಕ್ಷೇತ್ರದಿಂದ ಡಿ.ಸಿ.ಸಣ್ಣಸ್ವಾಮಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ, ತಾವು ಸೇರಿದಂತೆ ಎಲ್ಲಾ ಆಕಾಂಕ್ಷಿಗಳು ಅವರನ್ನು ಬೆಂಬಲಿಸುತ್ತೇವೆ. ಆದ ಕಾರಣ ವರಿಷ್ಠರು ಈ ವಿಚಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು. ಡಿ.ಕೆ.ನಿಂಗರಾಜ್, ಕುಮಾರಯ್ಯ, ಧರ್ಮೇಶ್, ಶೇಖರ್ ಇತರರು ಇದ್ದರು.