ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪುಟ್ಟೇಗೌಡಗೆ ಬಿ.ಫಾರಂ ವಿರೋಧಿಸಿ ಪಕ್ಷಕ್ಕೆ ಗುಡ್‌ಬೈ?

Mainashree
Updated On : 14 Apr 2013, 10:58 am

ಕ.ಪ್ರ. ವಾರ್ತೆ  ಚನ್ನರಾಯಪಟ್ಟಣ  ಏ.14
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ ಅವರಿಗೆ ಬಿ.ಫಾರಂ ನೀಡಿರುವುದನ್ನು  ವಿರೋಧಿಸಿ ಪಕ್ಷದ ಕೆಲ ನಾಯಕರು ಪಕ್ಷಕ್ಕೆ ಗುಡ್‌ಬೈ ಹೇಳುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್‌ನಿಂದ ಬಿ.ಫಾರಂ ಗಿಟ್ಟಿಸಲು ಕಡೆಗಳಿಗೆಯವರೆಗೆ ಸತತ ಪ್ರಯತ್ನ ನಡೆಸಿದ ಹಿರೀಸಾವೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎ. ಗೋಪಾಲಸ್ವಾಮಿ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜತೆಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕನ್ನಡಪ್ರಭದೊಂದಿಗೆ ಮಾತನಾಡಿ ತಾವು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ  ಕಾಂಗ್ರೆಸ್‌ನ್ನು ಸಂಘಟಿಸಿ ಗ್ರಾಪಂ, ತಾಪಂ ಹಾಗೂ ಜಿಪಂ ಚುನಾವಣೆಯಲ್ಲಿ ಸ್ವಂತ ಹಣ ಖರ್ಚು ಮಾಡಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕ್ಷೇತ್ರದಿಂದ ಇಬ್ಬರು ಆಯ್ಕೆಯಾಗಲು ಕಾರಣನಾಗಿದ್ದೇನೆ. ಜಿಲ್ಲಾ ನಾಯಕರುಗಳಾರು ಈ ಕೆಲಸ ಮಾಡಲಿಲ್ಲ. ಅಂದು ತಾನು ಕಾಂಗ್ರೆಸ್ ಮರ್ಯಾದೆ ಉಳಿಸಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಸ್ವಾಗತಿಸಿದ್ದು ಇಂದು ತನ್ನನ್ನು ತಿರಸ್ಕರಿಸಿರುವುದು ಖಂಡನೀಯ ಎಂದು ತಿಳಿಸಿದರು.
ತಾವೂ ಸೇರಿದಂತೆ ತಮ್ಮ ನಿಕಟ ಸಂಪರ್ಕದಲ್ಲಿರುವವರು ಕಾಂಗ್ರೆಸ್‌ಗೆ ಗುಡ್‌ಬೈ ಹೇಳಲಿದ್ದು, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮೋಹನ್‌ಕುಮಾರ್ ಇಂದೇ ರಾಜಿನಾಮೆ ಸಲ್ಲಿಸಲಿದ್ದು, ಮುಂದಿನ ಎರಡು ದಿನಗಳಲ್ಲಿ ಹಲವು ಮಂದಿ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಲಿದ್ದಾರೆ ಎಂದರು. ಸೋಮವಾರ ತಾವು ತಮ್ಮ ಬೆಂಬಲಿಗರೊಂದಿಗೆ ಬಂಡಾಯ ಅಭ್ಯರ್ಥಿಯಾಗಿ ಅರ್ಜಿ ಸಲ್ಲಿಸಲಿದ್ದು, ಆ ನಂತರದಲ್ಲಿ ತಮ್ಮ ರಾಜಕೀಯ ಜೀವನವನ್ನು ಯಾವ ಪಕ್ಷದಲ್ಲಿ ಕಳೆಯಬೇಕೆಂದು ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement