ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಎ.ಮಂಜು ನಾಮಪತ್ರ ಸಲ್ಲಿಕೆ

Vishwanath S
Updated On : 15 Apr 2013, 10:03 am

ಅರಕಲಗೂಡು:  ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಎ.ಮಂಜು ನಾಮಪತ್ರ ಸಲ್ಲಿಸಿದರು. ಪತ್ನಿ ತಾರಾ ಜತೆಯಲ್ಲಿದ್ದರು. ಗ್ರಾಮ ದೇವತೆ ದೊಡ್ಡಮ್ಮ ದೇವಿಗೆ ಪೂಜೆ ಸಲ್ಲಿಸಿದ ನಂತರ ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿ ಜೆ.ಜಗದೀಶ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅರಕಲಗೂಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಬ್ಬಳಿಗೆರೆ ಬೈರೇಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಹಳ್ಳಿ ಮೈಸೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಂಬಶಿವಪ್ಪ ಇದ್ದರು.

ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರ್ಪಡೆ
ಅರಸೀಕೆರೆ: ಬಾಣಾವರದ ಪೇಟೆ ನಿವಾಸಿಗಳಾದ ಮುಸ್ಲಿಂ ಜನಾಂಗದ ಪ್ರಮುಖರಾದ ಹಣ್ಣಿನ ವ್ಯಾಪಾರಿ ಅನ್ವರ್‌ಸಾಬ್ ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರ್ಪಡೆಗೊಂಡರು. ಜತೆಗೆ ಮುಸ್ಲಿಂ ಸಮಾಜದ ಅಧ್ಯಕ್ಷ ಕೆ.ಸಿ. ಖಾದರ್ ಬಾಷ, ಬಿ.ಜಿ. ಪ್ಯಾರೇಜಾನ್, ಜನಾಬ್ ಹಾಗೂ ಫಯಾಜ್ ಇನ್ನಿತರರು ಜೆಡಿಎಸ್. ಶಾಸಕ ಕೆ.ಎಂ. ಶಿವಲಿಂಗೇಗೌಡರ ಸಮ್ಮುಖದಲ್ಲಿ ಪಕ್ಷ ಸೇರಿದರು. ಇದೇ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಬಿ.ಎಂ. ಜಯಣ್ಣ, ಅರಸೀಕೆರೆ ಪುರಸಭಾ ಸದಸ್ಯ ಸಮೀವುಲ್ಲಾ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಸ್. ಆಶೋಕ್, ತಾ.ಪಂ. ಸದಸ್ಯ ಲಕ್ಷ್ಮಣ್, ಆರೀಫ್ ಜಾನ್ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement