ಪಕ್ಷೇತರ ಅಭ್ಯರ್ಥಿಯಾಗಿ ಶಿವರುದ್ರಪ್ಪ
ಬೇಲೂರು: ಬೇಲೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಬಲ್ಲೇನಹಳ್ಳಿ ಬಿ. ಶಿವರುದ್ರಪ್ಪ ಬೆಂಬಲರೊಂದಿಗೆ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ. ಶಿವರುದ್ರಪ್ಪ ಕ್ಷೇತ್ರದಲ್ಲಿ ನಾನು ಮತದಾರರಿಗೆ ಚಿರಪರಿಚಿತ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದಾಗ ಕ್ಷೇತ್ರದ ಮತದಾರರು 2 ನೇ ಸ್ಥಾನಕ್ಕೆ ಆಶೀರ್ವಾದ ಮಾಡಿದ್ದರು. ಈ ಬಾರಿ ತಮಗೆ ಕೆಜೆಪಿಯಿಂದ ಟಿಕೆಟ್ ತಪ್ಪಿದ ನಂತರದಲ್ಲಿ ಬೆಂಬಲಿಗರು, ಹಿತೈಷಿಗಳ ಒತ್ತಾಯದಿಂದ ಸ್ಪರ್ಧಿಸಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಯತ್ತ ಚಿಂತನೆ ನಡೆಸಿದ್ದು ಮತದಾರರು ನನ್ನನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.