20 ರಂದು ಪ್ರಪ್ರಥಮ ವಚನ ಸಾಹಿತ್ಯ ಸಮ್ಮೇಳನ
ಕನ್ನಡಪ್ರಭ ವಾರ್ತೆ ಹಾಸನ ಏ. 16
ಬೆಂಗಳೂರು ಜ್ಞಾನ ಮಂದಾರ ಅಕಾಡೆಮಿ, ಹಾಸನ ಜಿಲ್ಲಾ ವಚನ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಅಖಿಲ ಕರ್ನಾಟಕ ಪ್ರಪ್ರಥಮ ವಚನ ಸಾಹಿತ್ಯ ಸಮ್ಮೇಳನ ಏ.20 ರಂದು ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.
ಸಮ್ಮೇಳನಾಧ್ಯಕ್ಷರಾಗಿ ಡಾ. ಮಳಲಿ ವಸಂತಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ ರಾಷ್ಟ್ರಧ್ವಜಾರೋಹಣ ಹಾಗೂ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಚ್.ಬಿ. ಮದನ್ಗೌಡ ವಚನ ಧ್ವಜಾರೋಹಣ ನೆರವೇರಿಸುವರು.
ಜಿಲ್ಲಾಧಿಕಾರಿ ಕೆ.ಪಿ. ಮೋಹನ್ರಾಜ್ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡುವರು. ಕೇಂದ್ರ ಸಾಹಿತ್ಯ ಪರಿಷತ್ ರಾಜಾಧ್ಯಕ್ಷ ಪುಂಡಲೀಕ ಹಾಲಂಬಿ, ಡಾ.ಮಳಲಿಯವರ ಈಡು ಕಥಾ ಸಂಕಲನ ಬಿಡುಗಡೆ ಮಾಡುವರು. ಅಖಿಲ ಭಾರತ 78ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಸಿ.ಪಿ.ಕೃಷ್ಣಕುಮಾರ್ ಪುಸ್ತಕ ಪ್ರದರ್ಶನ ಉದ್ಘಾಟಿಸುವರು.
ಸಾಹಿತಿ ಹಾಗೂ ಯುವಜನ ಸೇವೆ ಇಲಾಖೆ ಕಾರ್ಯದರ್ಶಿ ಡಾ. ಸಿ. ಸೋಮಶೇಖರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಪತ್ರಕರ್ತ ರವೀಂದ್ರಭಟ್ ಐನಕೈ ಅರಳು ಮಲ್ಲಿಗೆ ಪ್ರಶಸ್ತಿ ಪ್ರದಾನ ಮಾಡುವರು.
ಮುಖ್ಯ ಅತಿಥಿಗಳಾಗಿ ಮುಂಬೈ ಕರ್ನಾಟಕ ಸಂಘದ ಅಧ್ಯಕ್ಷ ಡಾ. ಜಿ.ಡಿ. ಜೋಷಿ, ಸಾಹಿತಿ ಹಾಗೂ ಸಮಾಜ ಸೇವಕ ಡಿ.ಬಿ. ಬಸವೇಗೌಡ. ಕಲಾವಿದ ಡಾ ಎನ್. ರಾಮರೆಡ್ಡಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಲೀಲಾವತಿ, ಸಮಾಜಸೇವಕ ಅಟ್ಟಾವರ ರಾಮದಾಸ್ ಮೊದಲಾವರು ಭಾಗವಹಿಸುವರು.