ಮತದಾನ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ : ಎನ್.ವಿ. ಶ್ರೀ್ಠನಿವಾಸ್
ಕ.ಪ್ರ. ವಾರ್ತೆ ಹೊಳೆನರಸೀಪುರ ಏ. 16
ಮತದಾನ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಅಧಿಕಾರಿ ಮತ್ತು ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಎನ್.ವಿ.ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಪಡುವಲಹಿಪ್ಪೆಯ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ, ಸಾಕ್ರೆಟಿಸ್ ವೇದಿಕೆ, ಎನ್ಎಸ್ಎಸ್ ಘಟಕ ಮತ್ತು ಹಾಸನಾಂಬ ಲಯನ್ಸ್ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಮತದಾನದ ಮಹತ್ವ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್ ಮಾತನಾಡಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಿ.ಎಸ್.ರಾಜು ಮತದಾನದ ಮಹತ್ವ ವಿವರಿಸಿದರು. ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕೆ.ವಿ.ಪಾರ್ಥೇಶ ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ರಾಂಶುಪಾಲ ಡಾ.ಜಿ.ಡಿ.ನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಪ್ರೇಮ್ಕುಮಾರ್ ಸ್ವಾಗತಿಸಿದರು. ಕು. ಮಮತಾ ಪ್ರಾರ್ಥಿಸಿದರು. ಮದನ್ ವಂದಿಸಿದರು. ಶಿವರಾಜ್ ನಿರೂಪಿಸಿದರು.