ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಅಚ್ಚರಿ ಫಲಿತಾಂಶ: ರಾಘವನ್ ವಿಶ್ವಾಸ

Mainashree
Updated On : 18 Apr 2013, 11:32 am

ಹಾಸನ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಅಚ್ಚರಿ ಫಲಿತಾಂಶ ಬರಲಿದೆ ಎಂದು  ಕಾಂಗ್ರೆಸ್ ಸಂಸದ ಹಾಗೂ ಚುನಾವಣಾ ವೀಕ್ಷಕ ರಾಘವನ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಉತ್ತಮ ಫಲಿತಾಂಶ ಬರಲಿದೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು  ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಆಡಳಿತದಿಂದ ಬೇಸತ್ತಿರುವ ಮತದಾರರು ಕಾಂಗ್ರೆಸ್‌ಗೆ ಒಲವು ತೋರುತ್ತಿರುವುದರಿಂದ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ಲಭಿಸಲಿದೆ ಎಂದು ಹೇಳಿದರು. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರವನ್ನು ಪರಿಶೀಲಿಸಿದ್ದು, ಕೆಲ ಕ್ಷೇತ್ರಗಳಲ್ಲಿ ಟಿಕೆಟ್ ಸಿಗದೆ ಬಂಡಾಯದ   ಎದ್ದಿರುವವರನ್ನು ಪಕ್ಷಕ್ಕೆ ವಾಪಸ್ ಬರಲು ತಿಳಿಸಲಾಗಿದೆ.  ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಮೂಡಿದ್ದು, ಬಿಕ್ಕಟ್ಟುಗಳನ್ನು ಶಮನ ಮಾಡಲಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಚಂದ್ರಕಲಾ,  ಉಪಾಧ್ಯಕ್ಷ ನಾರಾಯಣಗೌಡ, ಎಚ್.ಪಿ. ಮೋಹನ್, ಅನುಪಮ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement