ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನುಗ್ಗೇಹಳ್ಳಿಯಲ್ಲೂ ಮಹೋತ್ಸವ

Mainashree
Updated On : 19 Apr 2013, 9:48 am

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ  19
ಚನ್ನರಾಯಪಟ್ಟಣ ತಾಲ್ಲೂಕು ನುಗ್ಗೇಹಳ್ಳಿಯಲ್ಲಿ ಶುಕ್ರವಾರ ಶ್ರೀರಾಮ ನವಮಿ ಮಹೋತ್ಸವವು ಭಕ್ತರ ಸಡಗರ ಸಂಭ್ರಮದ ನಡುವೆ ವಿಜೃಂಭಣೆಯಿಂದ ನಡೆಯಿತು.
ರಾಮನವಮಿ ಅಂಗವಾಗಿ ಬೆಳಗ್ಗೆ ಊರಿನ ಕಲ್ಯಾಣಿ ಶ್ರೀ ಆಂಜನೇಯಸ್ವಾಮಿ ದೇವರಿಗೆ ಅಭಿಷೇಕ, ಪೂಜೆ, ವಿಶೇಷ ಅಲಂಕಾರ ಜರುಗಿದವು. ಇದೇ ಸಂದರ್ಭದಲ್ಲಿ ವಿಶೇಷವಾಗಿ ಶ್ರೀರಾಮದೇವರ ಭಾವಚಿತ್ರವನ್ನು ಪೂಜಿಸುವ ಮೂಲಕ ಉತ್ಸವವು ಊರಿನ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನಡೆಯಿತು.
 ಶ್ರೀ ಆಂಜನೇಯಸ್ವಾಮಿ ಸೇವಾ ಸಮಿತಿ ವತಿಯಿಂದ ಮಹೋತ್ಸವದಲ್ಲಿ ಎಲ್ಲಾ ಭಕ್ತಾದಿಗಳಿಗೆ ಪಾನಕ ಮತ್ತು ಮಜ್ಜಿಗೆ ವಿತರಿಸಲಾಯಿತು. ಹೊಯ್ಸಳ ವೇದಿಕೆಯಲ್ಲಿ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement