ಬೆಂಗಳೂರು ಸ್ಫೋಟ ಪಿಎಫ್ಐ ಖಂಡನೆ
ಹಾಸನ: ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿ ನಡೆದಿರುವ ಬಾಂಬ್ ಸ್ಫೋಟವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದೆ. ಈ ಸ್ಫೋಟದ ಬಗ್ಗೆ ಪೊಲೀಸರು ನಿಷ್ಪಕ್ಷಪಾತ ತನಿಖೆಯನ್ನು ಕೈಗೊಳ್ಳಬೇಕು ಮತ್ತು ದುಷ್ಕೃತ್ಯದ ಹಿಂದಿನ ಕಾಣದ ಕೈಗಳನ್ನು ಬೆಳಕಿಗೆ ತರಬೇಕು ಎಂದು ಜಿಲ್ಲಾಧ್ಯಕ್ಷ ಸೈಯದ್ ಷರೀಫ್ ಆಗ್ರಹಿಸಿದ್ದಾರೆ. ಚುನಾವಣೆಯ ವೇಳೆ ಸ್ಫೋಟ ಸಂಭವಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿರುವುದರಿಂದ ಇದರ ಹಿಂದೆ ಯಾವುದಾದರೂ ರಾಜಕೀಯ ಶಕ್ತಿಗಳ ಕೈವಾಡವಿದೆಯೇ ಅಥವಾ ರಾಜ್ಯವನ್ನು ಅಸ್ಥಿರಗೊಳಿಸುವುದಕ್ಕಾಗಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆಯೇ ಎಂಬುದಾಗಿ ತನಿಖೆಯನ್ನು ನಡೆಸಬೇಕು ಎಂದು ಆಗ್ರಹಿಸಿದ್ದಾರೆ.