ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಕಲೇಶಪುರದಲ್ಲಿ ಪತ್ರಿಕಾ ದಿನಾಚರಣೆ

Rashmi Kasaragodu
Updated On : 7 Aug 2013, 12:50 pm

ಕ.ಪ್ರ.ವಾರ್ತೆ   ಸಕಲೇಶಪುರ   ಆ.6
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪಟ್ಟಣದ ರೋಟರಿ ಸಮುದಾಯ ಭವನದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಎಚ್.ಕೆ.ಕುಮಾರಸ್ವಾಮಿ ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು.
ತಾಲೂಕಿನಲ್ಲಿ ನೆರೆಯಿಂದ ಆದ ಹಾನಿಯ ಬಗ್ಗೆ ಖೇದ ವ್ಯಕ್ತಪಡಿಸಿದ ಶಾಸಕರು ತಾಲೂಕು ಪತ್ರಕರ್ತರ ಭವನ ಕಟ್ಟಲು 2 ಲಕ್ಷ ರು. ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು. ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಲೀಲಾವತಿ ಮಾತನಾಡಿ, ಗ್ರಾಮೀಣ ಪತ್ರಕರ್ತರ ಆದಾಯ ಬಹಳ ಕಡಿಮೆಯಿದ್ದು,  ಸರ್ಕಾರ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಂತೆ ಮನವಿ ಮಾಡಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತ ವೃತ್ತಿಯಲ್ಲಿ ಹಲವಾರು ಸವಾಲು ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪತ್ರಕರ್ತ ಎದೆಗುಂದದೆ ಕಾರ್ಯನಿರ್ವಹಿಸಬೇಕು ಎಂದರು. ಹಾಗೂ ಶೀಘ್ರದಲ್ಲಿ ತಾಲೂಕು ಪತ್ರಿಕಾ ಭವನ ನಿರ್ಮಿಸಲು ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಹೇಳಿದರು.
ಇದೇ ವೇಳೆ ಕೃಷಿ ಸಹಾಯಕ ನಿರ್ದೇಶಕ ಯೋಗೇಶ್ ಹಾಗೂ ಹೆತ್ತೂರಿನ ಪತ್ರಿಕಾ ವಿತರಕ ರಾಜೇಗೌಡ ಅವರನ್ನು ಸನ್ಮಾನಿಸಲಾಯಿತು. ಹಾಗೂ ನೂತನವಾಗಿ ಪ್ರಾರಂಭಿಸಲಾದ ಪತ್ರಕರ್ತರ ಸ್ವಸಹಾಯ ಸಂಘದ ಪಾಸ್ಬುಕ್ಗಳನ್ನು  ಉಪವಿಭಾಗಾಧಿಕಾರಿ ಶ್ರೀವಿದ್ಯಾ ಬಿಡುಗಡೆ ಮಾಡಿ ಎಲ್ಲಾ ಪತ್ರಕರ್ತರಿಗೂ ಹಂಚಿದರು.
ಕಿರಣ್ ಪ್ರಾರ್ಥಿಸಿದರು. ಸಂಘದ ನಿಕಟ ಪೂರ್ವ ಅಧ್ಯಕ್ಷ ಮಲ್ನಾಡ್ ಮಹಬೂಬ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಾ.ಸು ವಿಶ್ವನಾಥ್, ಜೈಕುಮಾರ್ ಮನರಂಜನಾ ಕಾರ್ಯಕ್ರಮ ನೀಡಿದರು. ಜೈಭೀಮು ಮಂಜು  ನಿರೂಪಿಸಿದರು. ಕಾರ್ಯದರ್ಶಿ ಪ್ರಸನ್ನಕುಮಾರ್ ಸ್ವಾಗತಿಸಿದರು.
ಸಂಘದ ಅಧ್ಯಕ್ಷ ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು, ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯ ಉದಯಕುಮಾರ್, ವಿಶೇಷ ಆಹ್ವಾನಿತರಾಗಿ ಉಪವಿಭಾಗಾಧಿಕಾರಿ ಶ್ರೀವಿದ್ಯಾ, ಸಹಾಯಕ ಸಾರಿಗೆ ಪ್ರಾದೇಶಿಕ ಅಧಿಕಾರಿ ಮುಗುಳವಳ್ಳಿ ಕೇಶವ ಧರಣಿ, ಮಾಜಿ ಶಾಸಕ ಎಚ್.ಎಂ ವಿಶ್ವನಾಥ್ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement