ಕ್ರೀಡಾಪಟುಗಳಿಗೆ ನಗದು ಬಹುಮಾನ
ಹಾಸನ: 2012-13 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ನಗದು ಬಹುಮಾನ ಯೋಜನೆ ಜಾರಿಯಲ್ಲಿದೆ. ರಾಷ್ಟ್ರ, ರಾಜ್ಯ ಮಟ್ಟದ ಗುಂಪು , ವೈಯಕ್ತಿಕ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳ ಪೂರ್ಣ ವಿವರವನ್ನು ಕ್ರೋಢೀಕರಿಸಿ ಸಲ್ಲಿಸಬೇಕಾಗಿರುವುದರಿಂದ ರಾಷ್ಟ್ರ,ರಾಜ್ಯ ಮಟ್ಟದ ಗುಂಪು, ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ, ದ್ವೀತಿಯ ಮತ್ತು ತೃತೀಯ ಸ್ಥಾನಗಳಲ್ಲಿ ವಿಜೇತರಾದ ಕ್ರೀಡಾಪಟುಗಳು ಯಾವುದಾದರೂ ಒಂದು ವಿಭಾಗದಲ್ಲಿ ಮಾತ್ರ ಅರ್ಜಿಯನ್ನು ಶಾಲಾ ಮುಖ್ಯಶಿಕ್ಷಕರ ಮುಖಾಂತರ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆಗಸ್ಟ್ 30 ರೊಳಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ವಿಷಯಗಳಿಗೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ಈಶ್ವರಪ್ಪ ಅವರನ್ನು ಮೊ.ಸಂ. 9448868229 ಸಂಪರ್ಕಿಸಬೇಕೆಂದು ಸಾ.ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.