ಮೂತ್ರನಾಳ ಕ್ಯಾನ್ಸರ್ಗೆ ಜಿಲ್ಲೆಯಲ್ಲಿ ಕಡಿಮೆ ವೆಚ್ಚ ಶಸ್ತ್ರಚಿಕಿತ್ಸೆ: ಡಾ.ನಿರಂಜನ್
ಹಾಸನ: ಮೂತ್ರನಾಳ ಕ್ಯಾನ್ಸರ್ನಿಂದ ಬಳಲುತ್ತಿರುವ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಮೂತ್ರನಾಳ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿರುವುದಾಗಿ ಮೂತ್ರಪಿಂಡ ತಜ್ಞ ಡಾ.ಜೆ.ನಿರಂಜನ್ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೆಲವರು ಮೂತ್ರನಾಳ ಕ್ಯಾನ್ಸರ್ಗೆ ತುತ್ತಾಗಿದ್ದರು. ಅವರು ಬೆಂಗಳೂರು ಸೇರಿದಂತೆ ಇತರೆ ಕಡೆಗಳಲ್ಲಿ ತೆರಳಿ ಚಿಕಿತ್ಸೆ ಪಡೆದಿದ್ದರು ಸಹ ರೋಗವನ್ನು ನಿವಾರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಅವರಿಗೆ ಶಸ್ತ್ರ ಚಿಕಿತ್ಸೆಯನ್ನು ನೀಡಿ ಅವರನ್ನು ಸಂಪೂರ್ಣ ಗುಣಮುಖರನ್ನಾಗಿ ಮಾಡಲಾಗಿದೆ ಎಂದರು.
ಬೆಂಗಳೂರು ಹಾಗೂ ಇತರೆ ಕಡೆಗಳಲ್ಲಿ ಮೂತ್ರನಾಶ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಗೆ 5 ರಿಂದ 6 ಲಕ್ಷ ರು.ಗಳ ವೆಚ್ಚ ತಗಲಿದೆ. ಆದರೆ ಜಿಲ್ಲೆಯಲ್ಲಿ ನಾವು ಕೇವಲ 1 ಲಕ್ಷ ರು.ಗಳಿಗೆ ಶಸ್ತ್ರಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.
ಮಂಗಳ ಆಸ್ಪತ್ರೆಯ ಅಶೋಕ್ಗೌಡ ಮಾತನಾಡಿ, ಜಿಲ್ಲೆಯ ಜನರ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿದಂತೆ ರೋಗಕ್ಕೆ ಕ್ಯಾಥ್ ಲ್ಯಾಬ್ ಪ್ರಾರಂಭಿಸಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಚಿಕಿತ್ಸೆ ನೀಡುವಂತೆ ವ್ಯವಸ್ಥೆಯನ್ನು ಪ್ರಾರಂಭಿಸುವುದಾಗಿ ಹೇಳಿದರು.