ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕರ, ಬಾಲಕಿಯರ ಹಾಸ್ಟೆಲ್ಗಳಿಗೆ ಅರ್ಜಿ ಆಹ್ವಾನ
ಹಾಸನ: ತಾಲೂಕು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2013-14ನೇ ಸಾಲಿಗೆ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಖಾಲಿ ಸ್ಥಾನಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟವರ್ಗಗಳ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆಯನ್ನು ತಾಲೂಕು ಹಿಂದುಳಿದ ವರ್ಗಗಳ ಕಚೇರಿ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಉಚಿತವಾಗಿ ಪಡೆದು, ಆ.20 ರೊಳಗೆ ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳ ನಿಲಯಪಾಲಕರಿಗೆ ಇದೇ ಕಚೇರಿಯಲ್ಲಿ ಸಲ್ಲಿಸಿ ಸ್ವೀಕೃತಿ ಪಡೆಯಬಹುದು.
ಹಾಸನ ನಗರ ಮೆಟ್ರಿಕ್ ನಂತರ ಬಾಲಕರ ವಿ.ನಿಲಯ, ಸ್ನಾತಕೋತ್ತರ ಹಾಗೂ ಮೆಟ್ರಿಕ್ ನಂತರ ಬಾಲಕಿಯರ ವಿ.ನಿಲಯ, ಸ್ನಾತಕೋತ್ತರ ಇವುಗಳಿಗೆ ಅರ್ಜಿ ಸಲ್ಲಿಸಬಹುದು.
ನಿಬಂಧನೆಗಳು: ಚಾಲ್ತಿಯಲ್ಲಿರುವ ಸರ್ಕಾರದ ಆದೇಶದ ಪ್ರಕಾರ ಹಿಂದುಳಿದ ವರ್ಗಗಳಿಗೆ ಸೇರಿದ ಸರ್ಕಾರದಿಂದ ನಡೆಸುತ್ತಿರುವ ಅಥವಾ ಸರ್ಕಾರದಿಂದ ಅಂಗೀಕೃತವಾದ ಶಿಕ್ಷಣ ಸಂಸ್ಥೆಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಸತಿ ನಿಲಯಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ವ್ಯಾಸಂಗ ಮಾಡುತ್ತಿರುವ ಶಿಕ್ಷಣ ಸಂಸ್ಥೆಯಿಂದ 05 ಕಿ.ಮೀ ದೂರದಲ್ಲಿ ವಾಸಿಸುವ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯಲು ಅರ್ಹರು. ಸ್ಥಳೀಯ ವಿದ್ಯಾರ್ಥಿಗಳು ನಿಲಯದಲ್ಲಿ ಪ್ರವೇಶ ಪಡೆಯಲು ಅವಕಾಶವಿರುವುದಿಲ್ಲ.
ಹಿಂದುಳಿದ ವರ್ಗಗಳಾದ ಪ್ರವರ್ಗ-2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ 44500- ಮತ್ತು ಪ್ರವರ್ಗ-1ಕ್ಕೆ 1ಲಕ್ಷ, ಹಾಗೂ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ ರೂ. 2.00ಲಕ್ಷ ಮಿತಿಯಲ್ಲಿರುವವರು ಪ್ರವೇಶಕ್ಕೆ ಅರ್ಹರು. ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶಕ್ಕೆ ಅನರ್ಹರು. ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಯಾವುದೇ ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ.
ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ವಿಧವೆಯವರ ಮಕ್ಕಳು, ದೇವದಾಸಿಯರ ಮಕ್ಕಳು, ಅಂಗವಿಕಲರ ಮಕ್ಕಳು, ತಂದೆ ಹಾಗೂ ತಾಯಿ ಇಲ್ಲದ ಅನಾಥ ಮಕ್ಕಳು, ಪ್ರಮಾಣೀಕೃತ ಬಾಲ ಕಾರ್ಮಿಕರು, ಯೋಜನಾ ನಿರ್ವಸಿತ ಪೋಷಕರ ಮಕ್ಕಳು, ದೌರ್ಜನ್ಯದಲ್ಲಿ ಮೃತಪಟ್ಟ ಶಾಶ್ವತ ಅಂಗವಿಕಲರಾಗಿರುವ ಪೋಷಕರ ಮಕ್ಕಳು, ಅಪಘಾತದಲ್ಲಿ ಮೃತಪಟ್ಟ ಶಾಶ್ವತ ಅಂಗವಿಕಲರಾಗಿರುವ ಪೋಷಕರ ಮಕ್ಕಳು, ಅದಿವಾಸಿ ಪಂಗಡದ (ಜೇನು ಕುರುಬ ಹಾಗೂ ಕೊರಗ ಸಮಾಜ)ಮಕ್ಕಳು, ಅಲೆಮಾರಿ ಜನಾಂಗದವರ ಮಕ್ಕಳು, ಭಿಕ್ಷುಕರ ಮಕ್ಕಳು, ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಆಯ್ಕೆಯಲ್ಲಿ ಆದ್ಯತೆ ನೀಡಲಾಗುವುದು.
ಅದಕ್ಕಾಗಿ ಸಂಬಂಧಪಟ್ಟ ದೃಢೀಕೃತ ಪತ್ರವನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗೆ ಸದಸ್ಯ ಕಾರ್ಯದರ್ಶಿ, ತಾಲೂಕು ಮಟ್ಟದ ಆಯ್ಕೆ ಸಮಿತಿ ಹಾಗೂ ವಿಸ್ತರಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಸನ ತಾಲೂಕು, ಇವರನ್ನು ಸಂಪರ್ಕಿಸಬಹುದು.
ಅರ್ಜಿ ಜತೆ ಸಲ್ಲಿಸಬೇಕಾದ ದಾಖಲಾತಿಗಳು
ಸಂಬಂಧಪಟ್ಟ ತಹಸೀಲ್ದಾರ್ರವರು ನೀಡಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ. ವಿದ್ಯಾಥಿಂಯು ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಪ್ರಾಂಶುಪಾಲರಿಂದ ದೃಢೀಕರಣ ಪತ್ರ. ವಿದ್ಯಾಥಿಯ ಸ್ವಂತ ಸ್ಥಳಕ್ಕೂ ವಸತಿ ನಿಲಯಕ್ಕೂ ಇರುವ ಅಂತರದ ಬಗ್ಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯವರಿಂದ ಪಡೆದಿರುವ ಅಂತರದ ಬಗ್ಗೆ ದೃಢೀಕರಣ ಪತ್ರ.
ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಬಗ್ಗೆ ಅಂಕಪಟ್ಟಿಯ ದೃಢೀಕರಣದ ಪ್ರತಿ (ಸಂಬಂಧಪಟ್ಟ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಿಂದ ದೃಢೀಕರಿಸಿರಬೇಕು) ಅಂಗವಿಕಲ ವಿದ್ಯಾರ್ಥಿಗಳು ವಿಕಲತೆಯ ಬಗ್ಗೆ ಸರ್ಕಾರಿ ವೈದ್ಯಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರವನ್ನು ಲಗತ್ತಿಸುವುದು.