ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ರೈತರಿಗೆ ಪರಿಹಾರಕ್ಕೆ ಆಗ್ರಹಿಸಿ ಕರವೇ ಕಾಲ್ನಡಿಗೆ

Rashmi Kasaragodu
Updated On : 8 Aug 2013, 12:08 pm

ಆಲೂರು: ತಾಲೂಕಿನಾದ್ಯಂತ ಅತಿವೃಷ್ಟಿಗೆ ಆಲೂಗೆಡ್ಡೆ, ಶುಂಠಿ, ಮೆಕ್ಕೆಜೋಳ ಸೇರಿದಂತೆ ಹಲವಾರು ಬೆಳೆಗಳು ರೋಗಗ್ರಸ್ಥವಾಗಿ ನಾಶವಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆ ಜಾಥಾ ನಡೆಸಿದರು.
ನಂತರ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಕರವೇ ಅಧ್ಯಕ್ಷ ನಟರಾಜ್ ಮಾತನಾಡಿ, ಕಳೆದೆರಡು ತಿಂಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆಗಳೆಲ್ಲಾ ನಾಶವಾಗಿದ್ದು ಆಲೂಗೆ ಅಂಗಮಾರಿ, ಕಾಫಿ ಹಾಗೂ ಶುಂಠಿಗೆ ಕೊಳೆರೋಗ ಬಂದು ಈ ಭಾಗದ ರೈತವರ್ಗ ತತ್ತರಿಸಿ ಹೋಗಿದೆ. ರೈತರಿಗೆ ದಿಕ್ಕು ತೋಚದಂತಾಗಿದೆ ಎಂದು ಹೇಳಿದರು.
ಸರ್ಕಾರ ರೈತರ ಸಮಸ್ಯೆಗಳನ್ನು ಅರಿತು ನಷ್ಟ ಅನುಭವಿಸಿರುವ ನತದೃಷ್ಟ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಒಂದು ವೇಳೆ ಪರಿಹಾರ ನೀಡದೆ ವಿಳಂಬವಾದಲ್ಲಿ ಕರವೇ ವತಿಯಿಂದ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ನಗರಾಧ್ಯಕ್ಷ ಪಿ.ಮಧು, ಉಪಾಧ್ಯಕ್ಷ ಇ.ಪಿ.ಮೋಹನ್, ಕಾರ್ಯಕರ್ತರಾದ ಕಣಗಾಲ್ ಸುರೇಶ್, ಕಾಚಿ, ಮಣಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement