ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವೋಟರ್ ಐಡಿಯಂತೆ ಆಧಾರ್ ಕೂಡ ಅಗತ್ಯ: ಶಾಸಕ ಬಾಲಕೃಷ್ಣ

Rashmi Kasaragodu
Updated On : 8 Aug 2013, 12:06 pm

ಕ.ಪ್ರ.ವಾರ್ತೆ   ಚನ್ನರಾಯಪಟ್ಟಣ   ಆ.7
ಚುನಾವಣಾ ಆಯೋಗದ ಗುರುತಿನ ಪತ್ರದಂತೆ ಆಧಾರ್ ಕಾರ್ಡ್ ಕೂಡ ಜನತೆಗೆ ಅಗತ್ಯವಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.  ಪಟ್ಟಣದಲ್ಲಿ ಆಧಾರ್ ಕಾರ್ಡ್ ಕೇಂದ್ರ ಉದ್ಘಾಟಿಸಿ ಮಾತನಾಡಿ, ಸರ್ಕಾರದಿಂದ ಯಾವುದೇ ದಾಖಲೆಗಳನ್ನು ಪಡೆಯಲು ಹಾಗೂ ಉದ್ಯೋಗ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಅಗತ್ಯವಿದೆ. ಜನತೆ ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.  ತಾಲೂಕಿನಲ್ಲಿ ಹಿರೀಸಾವೆಯಲ್ಲಿ ಆಧಾರ್ ಕಾರ್ಡ್ ನೀಡಲು ಸೌಲಭ್ಯ ಕಲ್ಪಿಸಲಾಗಿತ್ತು. ಮುಂದಿನ ದಿನಗಳಲ್ಲಿ ಮೂರು ಹೋಬಳಿಗಳಲ್ಲಿ ಮೂರು ಗ್ರಾಮ ಪಂಚಾಯಿತಿಗಳಲ್ಲಿ ಕೇಂದ್ರಗಳನ್ನು ತೆರೆದು ಕಾರ್ಡ್ ನೀಡಲು ವಿವರ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.  ತಹಸೀಲ್ದಾರ್ ನಟರಾಜ್ ಮಾತನಾಡಿ, ಪಟ್ಟಣದಲ್ಲಿ ಪ್ರತಿ ದಿನ 250ಮಂದಿ ತಮ್ಮ ಸ್ವ ವಿವರವನ್ನು ನೀಡುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಭಾನುವಾರ ಸರ್ಕಾರಿ ರಜೆಯಾಗಿರುವ ಹಿನ್ನಲೆಯಲ್ಲಿ ನೌಕರರು ಅಂದು ಕಾರ್ಡ್ಗೆ  ವಿವರ ನೀಡುವ ಸೌಲಭ್ಯ ಕಲ್ಪಿಸಿ ಮಂಗಳವಾರದಂದು ರಜೆ ದಿನವಾಗಿರುತ್ತದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಭಾನುವಾರ ರಜೆ ದಿನವಾಗಿರುತ್ತದೆ ಎಂದು ತಿಳಿಸಿದರು.  ಹಿರೀಸಾವೆ, ಶ್ರವಣಬೆಳಗೊಳ ಹಾಗೂ ನುಗ್ಗೇಹಳ್ಳಿ ಹೋಬಳಿಗಳನ್ನು ಪ್ರಥಮ ಹಂತದಲ್ಲಿ ಆಯ್ಕೆ ಮಾಡಿಕೊಂಡಿದ್ದು, 50 ಕಂಪ್ಯೂಟರ್ಗಳ ಮುಖೇನ ಜನತೆಯ ವಿವರ ಪಡೆಯಲಾಗುವುದು. ಮುಂದಿನ ಮೂರು ತಿಂಗಳಲ್ಲಿ ತಾಲೂಕಿನಲ್ಲಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement