ಬಿ.ಬಿ. ಶಿವಪ್ಪ ತೀವ್ರ ಅಸ್ವಸ್ಥ: ಬೆಂಗಳೂರು ಆಸ್ಪತ್ರೆಗೆ ದಾಖಲು
ಹಾಸನ: ಬಿಜೆಪಿ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯ ಬಿ.ಬಿ. ಶಿವಪ್ಪ ತೀವ್ರ ಅಸ್ವಸ್ಥರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಕಲೇಶಪುರ ತಾಲೂಕು ಕುಂಬರಹಳ್ಳಿಯಲ್ಲಿ ಗುರುವಾರ ಸಂಜೆ 4 ರಲ್ಲಿ ಹಠಾತ್ತನೆ ಶಿವಪ್ಪನವರಿಗೆ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಹಾಸನ ನಗರದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿ, ನಂತರ ಬೆಂಗಳೂರಿಗೆ ಕರೆದುಕೊಂಡು ಹೋಗಲಾಯಿತು.