ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನುಗ್ಗೇಹಳ್ಳಿ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ

Rashmi Kasaragodu
Updated On : 10 Aug 2013, 11:28 am

ನುಗ್ಗೇಹಳ್ಳಿ (ಚನ್ನರಾಯಪಟ್ಟಣ ತಾ.): ಶಿಕ್ಷಣದ ಜತೆಗೆ ಕ್ರೀಡೆಗೂ ಹೆಚ್ಚು ಪ್ರೋತ್ಸಾಹ, ಸಹಕಾರ ಅಗತ್ಯವಾಗಿ ನೀಡಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.
ಅವರು ಇಲ್ಲಿಗೆ ಸಮೀಪದ ಅಕ್ಕನಹಳ್ಳಿ ಕೂಡು ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ನುಗ್ಗೇಹಳ್ಳಿ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಪ್ರತಿದಿನ ಒಂದು ಗಂಟೆ ಪ್ರಾಮಾಣಿಕವಾಗಿ ಕ್ರೀಡೆಗಳಲ್ಲಿ ಭಾಗವಹಿಸಿದರೆ ರಾಜ್ಯ ಮತ್ತು ಅಂತಾರಾಜ್ಯದ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂದರು. ಶಿಕ್ಷಕರು ಕ್ರೀಡಾ ಕ್ಷೇತ್ರಕ್ಕೂ ಹೆಚ್ಚು ಗಮನ ಹರಿಸಬೇಕು. ಸರ್ಕಾರ ಕ್ರೀಡಾಕ್ಷೇತ್ರಕ್ಕೆ 138 ಕೋಟಿ ರು. ಬಿಡುಗಡೆ ಮಾಡಿದೆ. ಇದು ಸಾಲದು. ಸರ್ಕಾರ ಇನ್ನೂ ಹೆಚ್ಚು ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.
ಮಹೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಎಪಿಎಂಸಿ ಅಧ್ಯಕ್ಷ ದೊರೆಸ್ವಾಮಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ ಪಾಂಡು, ಗ್ರಾಪಂ ಅಧ್ಯಕ್ಷೆ ಮಂಜುಳ ಪ್ರಕಾಶ, ಕಂಪನಂಜೇಗೌಡ ವಿಎಸ್ಎನ್ ಕಾರ್ಯದರ್ಶಿ ದೇವರಾಜೇಗೌಡ, ಕ್ರೀಡಾ ಕಾರ್ಯದರ್ಶಿ ಶಿವಲಿಂಗೇಗೌಡ, ಅಧ್ಯಕ್ಷ ಡಿ.ಮಹಲಿಂಗಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ವಿಕ್ಟರ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement