'ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ'
ಸಕಲೇಶಪುರ: ಕಾಡಾನೆ ಹಾವಳಿ ಹಾಗೂ ಅತಿವೃಷ್ಟಿ ಸಮಸ್ಯೆಯಿಂದ ಬೆಳೆ ಹಾಗೂ ಬದುಕು ಕಳೆದಕೊಂಡಿರುವ ಬೆಳೆಗಾರರ ಸಂಕಷ್ಟಕ್ಕೆ ಸರಕಾರ ಕೂಡಲೇ ಸ್ಪಂದಿಸಬೇಕು ಎಂದು ಹಾನುಬಾಳ್ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಭಾಸ್ಕರ್ ಒತ್ತಾಯಿಸಿದ್ದಾರೆ. ಕಳೆದ 30 ವರ್ಷದಲ್ಲೇ ಭೀಕರ ಅತಿವೃಷ್ಟಿಗೆ ತುತ್ತಾಗಿರುವ ತಾಲೂಕಿನಲ್ಲಿ ಕಾಡಾನೆ ಹಾವಳಿಯೂ ಹೆಚ್ಚಿರುವುದರಿಂದ ರೈತರು ಬೆಳೆ ಉಳಿಸಿಕೊಳ್ಳಲು ಸಂಕಷ್ಟ ಪಡುವಂತಾಗಿದೆ. ಈ ನಿಟ್ಟಿನಲ್ಲಿ ಹಾಗೂ ಕೇಂದ್ರ ಸರಕಾರಗಳು ಉನ್ನತ ಮಟ್ಟದ ಅಧಿಕಾರಿಗಳ ತಂಡವನ್ನು ಕಳುಹಿಸಿ ಸಮೀಕ್ಷೆ ನಡೆಸಿ ಪರಿಹಾರವನ್ನು ನೀಡಬೇಕು. ಆದರೆ 2006-07 ಹಾಗೂ 2008-09ರಲ್ಲಿ ಅತಿವೃಷ್ಟಿಯಿಂದ ಕಾಫಿ ಉದ್ಯಮ ನಲುಗಿತ್ತು. ಈ ಸಂದರ್ಭದಲ್ಲಿ ಕೇಂದ್ರ ತಂಡ ಹಾಗೂ ಜಿಲ್ಲಾಧಿಕಾರಿಗಳು ಸಮೀಕ್ಷೆ ನಡೆಸಿ ಹಾನಿಯ ವರದಿ ನೀಡಿದ್ದರೂ ಯಾವುದೇ ಪರಿಹಾರ ದೊರೆತಿರಲಿಲ್ಲ. ಆದರೆ, ಈ ಬಾರಿ ಸಮೀಕ್ಷೆ ನಡೆಸಿ ಸಂಕಷ್ಟಕ್ಕೆ ಸಿಲುಕಿರುವ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದ್ದಾರೆ.