ಸಿದ್ದರಾಮಯ್ಯ ಹುಟ್ಟುಹಬ್ಬ: ರೋಗಿಗಳಿಗೆ ೈಹಣ್ಣು ವಿತರಣೆ
ಆಲೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟು ಹಬ್ಬದ ಪ್ರಯುಕ್ತ ಸೋಮವಾರ ಅಲ್ಪಸಂಖ್ಯಾತ, ದಲಿತ ಹಿಂದುಳಿದ ವರ್ಗಗಳ ಒಕ್ಕೂಟ (ಅಹಿಂದ) ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.
ತಾಲೂಕು ಅಹಿಂದ ಅಧ್ಯಕ್ಷ ಗೋಪಾಲಕೃಷ್ಣ, ಛಲವಾದಿ ಮಹಾಸಭಾ ಅಧ್ಯಕ್ಷ ಎ.ಟಿ.ಮಲ್ಲೇಶ್, ತಾಲೂಕು ಕುರುಬ ಸಂಘದ ಅಧ್ಯಕ್ಷ ಚಿಕ್ಕೇಗೌಡ, ತಾಲೂಕು ಕಸಾಪ ಅಧ್ಯಕ್ಷ ಗುಲಾಂ ಸತ್ತಾರ್, ತಾಲೂಕು ಕನಕ ನೌಕರರ ಸಂಘದ ಅಧ್ಯಕ್ಷ ಎ.ಪಿ.ಮೋಹನ್, ಮೇದಾರ ಸಂಘದ ಅಧ್ಯಕ್ಷ ಕೆ.ಹಾಲಪ್ಪ, ದೇವಾಂಗ ಸಂಘದ ಕಾರ್ಯದರ್ಶಿ ಬಿ.ಎಸ್.ಪರಮೇಶ್, ಸವಿತಾ ಸಮಾಜ ಸಮಿತಿ ಕಾರ್ಯದರ್ಶಿ ರವಿಕುಮಾರ್, ಬಲಿಜ ಸಂಘದ ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.