ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಹಣ-ಆಸ್ತಿಗಿಂತ ವಿದ್ಯೆ ಶಾಶ್ವತ ಸಂಪತ್ತು'

Rashmi Kasaragodu
Updated On : 12 Aug 2013, 11:26 am

ಹಾಸನ: ಹಣ, ಆಸ್ತಿ ಸಂಪತ್ತಿಗಿಂತ ವಿದ್ಯಾ ಸಂಪತ್ತು ಶಾಶ್ವತ, ವಿದ್ಯಾರ್ಥಿಗಳು ಇದನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಗುರಿ ಅಥವಾ ಸಾಧನೆಯಲ್ಲಿ ಜಯಶೀಲರಾಗಬಹುದು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎನ್.ರಾಜಮ್ಮ ಕಿವಿಮಾತು ಹೇಳಿದ್ದಾರೆ.
ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಸಾಂಸ್ಕೃತಿಕ ಕ್ರೀಡಾಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಉದ್ಘಾಟಿಸಿ ಅವರು ಮಾತನಾಡಿದ ಅವರು, ಕಲಿಕೆ ಕೇವಲ ಗಳಿಕೆಗೆ ಮೀಸಲಾಗದೇ ವಿದ್ಯಾರ್ಥಿಗಳ ಜೀವನಕ್ಕೆ ನಾಂದಿಯಾಗಬೇಕು ಎಂದರು.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ವಿ.ರಾಘವೇಂದ್ರ ಮಾತನಾಡಿ, ಆಟ ಮತ್ತು ಪಾಠ ಒಂದೇ ನಾಣ್ಯದ ಎರಡು ಮುಖಗಳು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು, ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಪ್ರಮುಖವಾದುದೆಂದರು.
ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲ ಕೃಷ್ಣಪ್ಪ ಮಾತನಾಡಿ, ವಿ ದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ವ್ಯಕ್ತಿತ್ವದ ವಿಕಾಸ ಸಾಧ್ಯವೆಂದರು.   
ಪ್ರಾಂಶುಪಾಲ ಯು.ಎ. ವೆಂಕಟರಾಮು ಮತ್ತಿತರರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಉಪನ್ಯಾಸಕ ನಿಂಗರಾಜು ಸ್ವಾಗತಿಸಿ, ತಮ್ಮಯ್ಯ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement