ತಾ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಾ ಪುರಸ್ಕಾರ
ಹಾಸನ: ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಆ. 31ರಂದು ನಗರದ ಕಲಾಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇಕಡಾ 85 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿರುವ ತಾಲೂಕಿನ ಸರ್ಕಾರಿ ಶಾಲಾ ಶಿಕ್ಷಕರ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ. ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 10 ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 9 ವಿದ್ಯಾರ್ಥ್ಥಿಗಳಿಗೆ(ಕಲಾ-3, ವಿಜ್ಞಾನ-3 ಮತ್ತು ಕಾಮರ್ಸ್-3) ಪುರಸ್ಕರಿಸಲಾಗುವುದು. ವಿದ್ಯಾರ್ಥಿಗಳು, ಪೋಷಕರು ನಿಗದಿತ ಅರ್ಜಿ ನಮೂನೆಯಲ್ಲಿ ಆ.24ರೊಳಗೆ ಅರ್ಜಿ ಸಲ್ಲಿಸುವುದು. ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆ. 17ರ ಶನಿವಾರ ಜಿಲ್ಲಾ ಕ್ರೀಡಾಂಗಣದಲ್ಲಿ 11ಕ್ಕೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಆಟೋಟ ಸ್ಪರ್ಧೆಯ ವಿವರಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿರುತ್ತದೆ. ಸೆಪ್ಟಂಬರ್ 6ರ ನಂತರ ನಿವೃತ್ತರಾದ ಪ್ರಾ.ಶಾಲಾ ಶಿಕ್ಷಕರಿಗೂ ಈ ಸಂದರ್ಭದಲ್ಲಿ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಅಣ್ಣಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ರೇಣುಕಪ್ರಸಾದ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9449394925, 9686622024 ಸಂಪರ್ಕಿಸಿ.