ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಯಗಚಿ ಎಂಜಿನಿಯರ್ ಕಾಲೇಜಿನಲ್ಲಿ ತಿಳಿವಳಿಕೆ ದಿನ

Rashmi Kasaragodu
Updated On : 14 Aug 2013, 12:08 pm

ಕ.ಪ್ರ.ವಾರ್ತೆ    ಹಾಸನ    ಆ. 13
ಯಗಚಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೊದಲನೇ ವರ್ಷದ ವಿದ್ಯಾರ್ಥಿಗಳಿಗಾಗಿ ತಿಳಿವಳಿಕೆ ದಿನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿ ಕಾಲೇಜು ಟ್ರಸ್ಟ್ನ ಕಾರ್ಯದರ್ಶಿ ಕೆ.ಪಿ. ವಿಜಯ ಕುಮಾರ್ ಮಾತನಾಡಿ, ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪೈಪೋಟಿ ಎದುರಿಸಲು ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿಯಬೇಕೆಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ನಿರ್ದೇಶಕ ಡಾ. ಎಂ.ಜಿ. ವೆಂಕಟೇಶಮೂರ್ತಿ ಮಾತನಾಡಿ, ಸಂಸ್ಥೆಯು ರ್ಯಾಗಿಂಗ್ ಮುಕ್ತವಾಗಿದ್ದು, ಉತ್ತಮ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳನ್ನು ಕಾಲೇಜಿಗೆ ದಾಖಲಾತಿ ಮಾಡಿದರೆ ಸಾಲದು, ಪೋಷಕರು ವಿದ್ಯಾರ್ಥಿಗಳ ಚಟುವಟಿಕೆಗಳ ಬಗ್ಗೆ ವಿಚಾರಿಸುತ್ತಿರಬೇಕೆಂದು ಹೇಳಿದರು. ಪ್ರಾಂಶುಪಾಲ ಡಾ. ಸಿ. ಮಲ್ಲಿಕಾರ್ಜುನ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತುಬದ್ಧ ಜೀವನವನ್ನು ಕಲಿಯಬೇಕೆಂದು ಹೇಳುತ್ತಾ ಹಾಗೂ ಕಾಲೇಜಿನ ನೀತಿ ನಿಯಮಗಳ ಬಗ್ಗೆ ತಿಳಿಸಿದರು.
ಉಷಾ ಎಸ್.ಪಿ. ನಿರೂಪಿಸಿದರು. ರಾಣಿ ಆರ್. ಸ್ವಾಗತಿಸಿದರು. ನರಸಿಂಹಮೂರ್ತಿ ಕೆ.ಸಿ. ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement