ಕಾಲು ಬಾಯಿ ಜ್ವರ ರೋಗ ನಿಯಂತ್ರಣಕ್ಕೆ ಲಸಿಕೆ
ಹಾಸನ: ಕಾಲು ಬಾಯಿ ಜ್ವರ ರೋಗ ನಿಯಂತ್ರಣ ಯೋಜನೆಯಡಿ ಸೆ. 12 ರವರೆಗೆ ಜಿಲ್ಲೆಯಾದ್ಯಾಂತ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗದ ವಿರುದ್ಧ ರೋಗ ನಿರೋಧಕ ಸಾಮೂಹಿಕ ಲಸಿಕೆ ಆಂದೋಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ಜಾನುವಾರು ಮಾಲೀಕರು, ಹೈನುರಾಸು ಸಾಕಾಣಿಕೆದಾರರು, ರೈತರು, ಸಾರ್ವಜನಿಕರು ತಮ್ಮ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ಹಾಕಿಸಿಕೊಳ್ಳುವ ಮೂಲಕ ತಮ್ಮ ಜಾನುವಾರುಗಳನ್ನು ಕಾಲು ಬಾಯಿ ಜ್ವರ ರೋಗದಿಂದ ಸಂರಕ್ಷಿಸಿಕೊಳ್ಳುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕರು ಕೋರಿದ್ದಾರೆ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಜಾನುವಾರು ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಮಾರ್ಚ್ 31ರ ವರೆಗೆ ಭಾರತ ಸರ್ಕಾರದ ಯೋಜನೆಯಾದ ರಾಷ್ಟ್ರೀಯ ಜಾನುವಾರು ವಿಮಾ ಯೋಜನೆ ಹಮ್ಮಿಕೊಳ್ಳಲಾಗಿದೆ. ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳನ್ನು ವಿಮೆಗೊಳಪಡಿಸುವಂತೆ ಹಾಗೂ ಈ ಯೋಜನೆಯ ಪ್ರಯೋಜನ ಪಡೆಯುವಂತೆ ಕೋರಲಾಗಿದೆ.