ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜನಸಂಖ್ಯಾ ಸ್ಫೋಟದಿಂದ ನಿರೀಕ್ಷಿತ ಅಭಿವೃದ್ಧಿ ಸಾಧಿಸುವಲ್ಲಿ ವಿಫಲ: ಶಾಸಕ ರುದ್ರೇಶಗೌಡ

Rashmi Kasaragodu
Updated On : 16 Aug 2013, 12:36 pm

ಕ.ಪ್ರ.ವಾರ್ತೆ   ಬೇಲೂರು   ಆ.15
ಅಹಾರ, ನೀರಾವರಿ, ಕೈಗಾರಿಕೆ ಕ್ಷೇತ್ರದಲ್ಲಿ ದೇಶ ಅಭಿವೃದ್ಧಿ ಕಾಣುತ್ತಿದ್ದರೂ ಜನಸಂಖ್ಯಾ ಸ್ಫೋಟದಿಂದ ನಿರೀಕ್ಷಿತ ಮಟ್ಟ ತಲುಪುವಲ್ಲಿ ವಿಫಲವಾಗುತ್ತಿದ್ದೇವೆ ಎಂದು ಶಾಸಕ ವೈ.ಎನ್.ರುದ್ರೇಶ್ಗೌಡ ಹೇಳಿದರು.
ಪಟ್ಟಣದ ಸರ್ಕಾರಿ ಕಾಲೇಜು ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ  ಮಾತನಾಡಿ, ದಿನೇ ದಿನೇ ದೇಶದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಸಮರ್ಪಕ ಶಿಕ್ಷಣ, ಆಹಾರ ಇತರೆ ಮೂಲಭೂತ ಸೌಕರ್ಯ ನೀಡುವಲ್ಲಿ ಸಾಧ್ಯವಾಗುತ್ತಿಲ್ಲ ಎಂದರು.
ದೇಶದ ಬಡ ಜನತೆಯ ಹಿತ ಕಾಪಾಡಲು ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತರುತ್ತಿದ್ದು ಇದರಿಂದ ಆಹಾರ ಪೂರೈಕೆಯಲ್ಲಿನ ವ್ಯತ್ಯಾಸವನ್ನು ಸರಿದೂಗಿಸಬಹುದಾಗಿದೆ. ಗ್ರಾಮೀಣ ಪ್ರದೇಶದ ರೈತರ ತಮ್ಮ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸ ನೀಡುವಲ್ಲಿ ಮುಂದಾಗಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಸಮಾಜಸೇವೆ, ಕರಾಟೆ ಹಾಗೂ ಇತರ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ ಗಣ್ಯರನ್ನು ವಿದ್ಯಾರ್ಥಿಗಳನ್ನು ಹಾಗೂ 3 ಬಾರಿ ಪುರಸಭೆಗೆ ಆಯ್ಕೆಯಾದ ಧರ್ಮೇಗೌಡರನ್ನು ಸನ್ಮಾನಿಸಲಾಯಿತು


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement