ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಪದಾಧಿಕಾರಿಗಳ ಆಯ್ಕೆಯಲ್ಲಿ ಅವಕಾಶವಾದಿಗಳಿಗೆ ಮನ್ನಣೆ'

Rashmi Kasaragodu
Updated On : 17 Aug 2013, 12:37 pm

ಕ.ಪ್ರ.ವಾರ್ತೆ    ಅರಸೀಕೆರೆ    ಆ.16
ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಜಿಲ್ಲಾ ನಾಯಕರು ಅವಕಾಶವಾದಿಗಳಿಗೆ ಮಣೆ ಹಾಕುವ ಮೂಲಕ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ತಾಲೂಕಿನ ನಿಷ್ಠಾವಂತ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯ ಸಾರಥ್ಯವನ್ನು ರಾಷ್ಟ್ರಮಟ್ಟದಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಹಿಸಿಕೊಂಡಿರುವ ಕಾರಣ ರಾಜ್ಯ ಬಿಜೆಪಿ ವಲಯದಲ್ಲಿ ವಿದ್ಯುತ್ ಸಂಚಲನ ಉಂಟಾಗಿದೆ. ಇದರ ಪರಿಣಾಮವೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಭಾವಿಸಿದ್ದ ತಾಲೂಕಿನ ಕೆಲವು ಮುಖಂಡರು ತಮ್ಮ ಕೆಲವು ಹಿಂಬಾಲಕರೊಂದಿಗೆ ರಾತ್ರೋರಾತ್ರಿ ಪಕ್ಷ ನಿಷ್ಠೆಯನ್ನು ಬದಲಿಸಿ ಪಕ್ಷಾಂತರಗೊಂಡರು.
ಬಿಜೆಪಿ ಭ್ರಷ್ಟಾಚಾರಿಗಳ ಪಕ್ಷ. ಕಾರ್ಯಕರ್ತರನ್ನು ಇಲ್ಲಿ ಬೆಳೆಯಲು ಬಿಡುವುದಿಲ್ಲ ಎಂದು ಹೇಳುವ ಮೂಲಕ ಕೆಜೆಪಿ, ಕಾಂಗ್ರೆಸ್, ಜೆಡಿಎಸ್ಗೆ ಪಕ್ಷಾಂತರ ಮಾಡಿದ್ದರು. ಅಲ್ಲದೆ ಇವರುಗಳು ಹಿಂದೆ ನಡೆದಿದ್ದ ಪುರಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಗಳ ಬೆನ್ನಿಗೆ ಚೂರಿ ಹಾಕಿ ಬೇರೆ ಬೇರೆ ಪಕ್ಷದ ಅಭ್ಯರ್ಥಿಗಳ ಪರವಾಗಿ ನಿಂತು ಪರೋಕ್ಷವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು ಎಂದು ಕಾರ್ಯಕರ್ತ ಸುರೇಶ್ಕುಮಾರ್ ಟೀಕೆ ಮಾಡಿದ್ದರು.
ಪ್ರಸ್ತುತ ಪರಿಸ್ಥಿತಿಯಲ್ಲಿ ಆ ಪಕ್ಷಗಳಲ್ಲಿ ಇವರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡದ ಕಾರಣ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎಂದು ಲೆಕ್ಕಾಚಾರ ಮಾಡುತ್ತಿರುವ ಈ ಅವಕಾಶವಾದಿ ರಾಜಾಕಾರಣಿಗಳ ಗುಂಪು ಬೇರೆ ದಾರಿ ಕಾಣದೆ ಈಗ ಬಿಜೆಪಿ ಪಕ್ಷದ ಕಡೆಗೆ ಮತ್ತೆ ವಲಸೆ ಬರುತ್ತಿದೆ ಎಂದು ಖಂಡಿಸಿದ್ದಾರೆ.
ಇಂತಹ ಸಮಯ ಸಾಧಕರಿಗೆ ಯಾವುದೇ ಮಣೆ ಹಾಕದೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಜಿಲ್ಲೆಯಲ್ಲಿನ ಕೆಲವು ನಾಯಕರು ಪರಿಗಣಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡದೆ ಕಡೆಗಣಿಸಿದರೆ ಮುಂದಿನ ಲೋಕಸಭಾ ಚುನಾವಣಾ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ತಾಲೂಕಿನ ನಿಷ್ಠಾವಂತ ಕಾರ್ಯಕರ್ತರ ಸಮೂಹ ತಮ್ಮ ಅಸಮಾಧಾನ ವ್ಯಕ್ತಪಡಿಸಿದೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement