ಕಿಡಿಗೇಡಿಗಳಿಂದ ಹುಲ್ಲಿನ ಮೆದೆಗೆ ಬೆಂಕಿ, ಅಪಾರ ನಷ್ಟ
ಸಕಲೇಶಪುರ: ಕಿಡಿಗೇಡಿಗಳ ಕೃತ್ಯಕ್ಕೆ ಮೂರು ಸಾವಿರ ಕಂತೆಗಳಿದ್ದ ಬತ್ತದ ಹುಲ್ಲಿನ ಮೆದೆ ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಹೆಬ್ಬಸಾಲೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಗ್ರಾಮದ ಬಸವರಾಜು ಎಂಬುವವರಿಗೆ ಸೇರಿದ ಹುಲ್ಲಿನ ಮೆದೆಗೆ ರಾತ್ರಿ ವೇಳೆ ಕಿಡಿಗೇಡಿಗಳು ಬೆಂಕಿ ಹಾಕಿದ್ದರಿಂದ ಹುಲ್ಲಿನ ಮೆದೆ ಸಂಪೂರ್ಣ ಭಸ್ಮವಾಗಿದೆ. ಇದರಿಂದ ಅಪಾರ ನಷ್ಟು ಉಂಟಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಸವರಾಜು ಪಟ್ಟಣ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.