ಕೆಡಿಪಿ ಸಭೆ ಮುಂದೂಡಿಕೆ
ಹಾಸನ: ರಾಜ್ಯ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧ್ಯಕ್ಷತೆಯಲ್ಲಿ ಆ.20 ರಂದು ಜಿಲ್ಲಾ ಪಂಚಾಯ್ತಿ ಹೊಯ್ಸಳ ಸಭಾಂಗಣದಲ್ಲಿ ನಿಗದಿಯಾಗಿದ್ದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.