ಕ್ರೀಡಾ ಚಟುವಟಿಕೆಗಳ ಉದ್ಘಾಟನೆ
ಅರಸೀಕೆರೆ: ಪಟ್ಟಣದ ಹೊಯ್ಸಳೇಶ್ವರ ಪದವಿ ಪೂರ್ವ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಿದ್ದರಾಮಪ್ಪ ಉದ್ಘಾಟಿಸಿದರು. ನಿಮ್ಮ ತಂದೆ ತಾಯಿ ನಿಮ್ಮ ಮೇಲಿಟ್ಟಿರುವ ನಿರೀಕ್ಷೆಯನ್ನು ಹುಸಿ ಮಾಡದೆ ಅಭ್ಯಾಸದ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದರೆ ನಿಮ್ಮ ಕನಸು ನನಸಾಗಲಿದೆ ಎಂದರು. ಅನ್ನಲಕ್ಷ್ಮಿಯೋಗನಾಥ್ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ, ವಿದ್ಯಾರ್ಥಿಗಳು ಶಿಸ್ತು, ಸಂಯಮ, ರೂಢಿಸಿ ಕೊಂಡರೆ ಬದುಕು ಪರಿಪೂರ್ಣವಾಗಲಿದೆ ಎಂದು ಹೇಳಿದರು. ತರಳಬಾಳು ವಿದ್ಯಾ ಸಂಸ್ಥೆಯ ಕೇಂದ್ರ ಸಲಹಾ ಸಮಿತಿ ಸದಸ್ಯ ಎಚ್.ಜಿ.ರೇವಣ್ಣ ಮಾತನಾಡಿ, ಸಂಸ್ಥೆ ಉತ್ತಮ ವಿದ್ಯಾಭ್ಯಾಸಕ್ಕಾಗಿ ನುರಿತ ಉಪನ್ಯಾಸಕರು ಹಾಸ್ಟೆಲ್ ಸೌಲಭ್ಯ ನೀಡುತ್ತಿದ್ದು ಇದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ತಂದೆ ತಾಯಿ ಹಾಗೂ ಶಿಕ್ಷಣ ಸಂಸ್ಥೆಗೆ ಹಾಗೂ ಉಪನ್ಯಾಸಕರುಗಳಿಗೆ ಗೌರವ ತಂದುಕೊಡಲು ಶ್ರಮಿಸಬೇಕೆಂದು ಕರೆ ನೀಡಿದರು. ಕಾಲೇಜು ಪ್ರಾಂಶುಪಾಲ ಎಚ್.ಎನ್.ಈಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಡಾ. ಚಂದ್ರಶೇಖರ್, ರೋಟರಿ ಮಾಜಿ ಅಧ್ಯಕ್ಷ ಶಾಂತಪ್ಪ, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಶಾಂತಕುಮಾರ್, ಮಹಾಲಿಂಗಪ್ಪ, ರೇಲ್ವೆ ಇಲಾಖೆಯ ರಮಾನಂದ್, ಗೊಲ್ಲರಹಳ್ಳಿ ಕರಿಯಪ್ಪ, ವರ್ತಕ ಕೆ.ಟಿ ದಿವಾಕರ್ ಮಾತನಾಡಿದರು. ಬೋಧಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.