ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಚನ್ನರಾಯಪಟ್ಟಣ ಸರ್ಕಾರಿ ಕಚೇರಿಗಳಿಗೆ ಲೋಕಾಯುಕ್ತ ಎಸ್ಪಿ ಭೇಟಿ

Rashmi Kasaragodu
Updated On : 18 Aug 2013, 12:54 pm

ಕ.ಪ್ರ.ವಾರ್ತೆ   ಚನ್ನರಾಯಪಟ್ಟಣ   ಆ.17
ಲೋಕಾಯುಕ್ತ ಎಸ್ಪಿ ವೇದಮೂರ್ತಿ ಅವರು ಶನಿವಾರ ಪಟ್ಟಣದ ಸರ್ಕಾರಿ ಕಚೇರಿ ಹಾಗೂ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಥಮವಾಗಿ ತಾಲೂಕು ಕಚೇರಿಗೆ ಭೇಟಿ ನೀಡಿದ ಲೋಕಾಯುಕ್ತ ಎಸ್ಪಿ  ಕಚೇರಿ ಸಿಬ್ಬಂದಿಗಳ ಗೈರು ಹಾಜರಾತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಕೇಳಿದ್ದಕ್ಕೆ ಸಿಬ್ಬಂದಿ ಚುನಾವಣೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.  ನಂತರ ಅಧಿಕಾರಿಗಳು ಹಿಂದುಳಿದ ವರ್ಗಗಳ ಬಾಲಕರಿಯ ವಸತಿ ನಿಲಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಆಹಾರ ಮತ್ತು ನಿರ್ವಹಣೆ ಪರಿಶೀಲಿಸಿದರು ಹಾಗೂ ಗುಣಮಟ್ಟ ಮತ್ತು ಸ್ಪಚ್ಚತೆ ಕಾಯ್ದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಲೋಕಾಯುಕ್ತ ಅಧಿಕಾರಿಗಳು ಬೇಲೂರಿಗೆ ತೆರಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement