ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮಾಧ್ಯಮಗಳಿಗೆ ನಾಡು ಕಟ್ಟುವ ಸಾಮರ್ಥ್ಯ

Rashmi Kasaragodu
Updated On : 18 Aug 2013, 12:54 pm

ಅರಕಲಗೂಡು: ಪ್ರಜಾಪ್ರಭುತ್ವದ ನೆಲೆಗಟ್ಟು ಗಟ್ಟಿಗೊಳಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದು ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಹಾಯಕ ನಿರ್ದೇಶಕ ವಿನೋದ್ಚಂದ್ರ ತಿಳಿಸಿದ್ದಾರೆ.
 ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಅವರು ಇಂದು ಪತ್ರಿಕಾ ಕ್ಷೇತ್ರದಲ್ಲಿ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ವೃತ್ತಿ ಮತ್ತು ಪ್ರವೃತ್ತಿಯಾಗಿದ್ದ ಪತ್ರಿಕಾ ಕ್ಷೇತ್ರ ಇಂದು ಉದ್ಯಮವಾಗಿ ರೂಪುಗೊಂಡಿವೆ.
 ಇದೊಂದು ಉತ್ತಮ ಬೆಳವಣಿಗೆಯಾದರೂ ಪತ್ರಿಕೆಗಳು ಬಂಡವಾಳಶಾಹಿಗಳ ಕೈಗಳಲ್ಲಿ ಸೇರುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಅಭಿಪ್ರಾಯಪಟ್ಟರು.
     ಮಾಧ್ಯಮಗಳಿಗೆ ದೇಶ ಕಟ್ಟುವ ಸಾಮರ್ಥ್ಯವಿದೆ. ಕೇವಲ ಪ್ರತಿರೋಧದ ವಿಚಾರಗಳ ಚಿಂತನೆಯನ್ನಷ್ಟೇ ಮಾಡದೇ ಅಭಿವೃದ್ಧಿ ವಿಚಾರಗಳಿಗೂ ಮಾಧ್ಯಮಗಳು ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ಸಲಹೆ ನೀಡಿದರು.
 ಗ್ರಾಮೀಣ ಪತ್ರಕರ್ತರು ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡಿದರೂ ಅವರು ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗಿಲ್ಲ.ಈ ನಿಟ್ಟಿನಲ್ಲಿ ಸರ್ಕಾರಗಳು ಯೋಜನೆಗಳನ್ನು ರೂಪಿಸುವ ಅಗತ್ಯವಿದೆ ಎಂದು ನುಡಿದರು.
  ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಲೀಲಾವತಿ ಮಾತನಾಡಿ, ಅರಕಲಗೂಡು ತಾಲೂಕು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ.ಈ ಬಗ್ಗೆ ಪತ್ರಕರ್ತರು ಸ್ಥಳೀಯ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಗಮನ ಸೆಳೆಯುವ ವರದಿಗಳನ್ನು ಪ್ರಕಟಿಸುತ್ತಿದ್ದರೂ ಏನು ಪ್ರಯೋಜನವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸನ್ಮಾನಿತರಾಗಿ ಮಾತನಾಡಿದ ಮಾಧ್ಯಮ ಸಲಹಾ ಸಮಿತಿ ಸದಸ್ಯ ಉದಯಕುಮಾರ್,ಪತ್ರಿಕೆಗಳು ಮತ್ತು ಪತ್ರಕರ್ತರು ಸಮಿತಿಯ ಆಶಯಗಳೊಂದಿಗೆ ಕಾರ್ಯನಿರ್ವಹಿಸಬೇಕಿದೆ.ಆರೋಗ್ಯವಂತ ಸಮಾಜಮುಖಿ ಕೆಲಸ ಪತ್ರಿಕೆಗಳಿಂದ ಆಗಬೇಕಿದೆ ಎಂದು ಹೇಳಿದರು.
  ಪಪಂ ಸದಸ್ಯ ರಮೇಶ್ವಾಟಾಳ್ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಸಹ ಪತ್ರಕರ್ತರ ಸಂಘಗಳಿಗೆ ಸ್ವಂತ ಭವನಗಳಿದ್ದು,ಅರಕಲಗೂಡು ತಾಲೂಕು ಪತ್ರಕರ್ತರು ಇದರಿಂದ ವಂಚಿತವಾಗಿದ್ದಾರೆ.
  ಇದುವರೆಗೂ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ನಡೆದಿಲ್ಲ.ಮುಂದಿನ ದಿನಗಳಲ್ಲಿ ಆರಂಭಗೊಳ್ಳುವ ಸಭೆಯಲ್ಲಿ ಪಟ್ಟಣದ ಹೃದಯಭಾಗದಲ್ಲಿ ನಿವೇಶನ ಕೊಡಿಸುವ ಕುರಿತು ವಿಷಯ ಪ್ರಸ್ತಾಪ ಮಾಡುವುದಲ್ಲದೆ, ಹೋರಾಟ ಕೂಡ ಕೈಗೊಳ್ಳುವುದಾಗಿ ಭರವಸೆ ನೀಡಿದರು.
 ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಂಕರ್ ಅಧ್ಯಕ್ಷೀಯ ಭಾಷಣ ಮಾಡಿದರು. ತಾಲೂಕು ಪಂಚಾಯಿತಿ ವ್ಯವಸ್ಥಾಪಕಿ ಚಂದ್ರಕಲಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ 25 ವರ್ಷ ಸೇವೆ ಸಲ್ಲಿಸಿದ ಪತ್ರಕರ್ತರಾದ ಚಂದ್ರಶೇಖರ್, ಕೃಷ್ಣಮೂರ್ತಿ,ಅ.ರಾ.ಸುಬ್ಬರಾವ್ ಹಾಗೂ ಮಾನ್ಯತಾ ಸಮಿತಿ ಸದಸ್ಯ ಉದಯ ಕುಮಾರ್ ಅವರುಗಳನ್ನು ಸನ್ಮಾನಿಸಲಾಯಿತು.
ಸಿಪಿಐ ರಾಜು,ಸಿಡಿಪಿಒ ಮಲ್ಲೇಗೌಡ,ವಕೀಲರ ಸಂಘದ ಅಧ್ಯಕ್ಷ ಬಿ.ಸಿ.ರಾಜೇಶ್,ಜನಾರ್ದನಗುಪ್ತ, ಶಂಕರಯ್ಯ,ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಬ್ಬಳಿಗೆರೆ ಭೈರೇಗೌಡ,ಸಮಾಜ ಕಲ್ಯಾಣಾಧಿಕಾರಿ ನಾಗರಾಜ್,ಅಗ್ನಿಶಾಮಕ ಠಾಣಾಧಿಕಾರಿ ಜ್ಞಾನೇಂದ್ರ ಮೂರ್ತಿ, ಪತ್ರಕರ್ತರ ಸಂಘದ ಕಾರ್ಯದರ್ಶಿ ಕುಮಾರಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement