ಶಾಲೆ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ
ಹಾಸನ: ಶಾಲಾಭಿವೃದ್ಧಿ ಕಾಣಬೇಕಾದರೆ ರಾಜಕೀಯ ಮಾಡದೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ತಾಲೂಕಿನ ಬಾಗೇಶಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಮ್ಮೂರ ಶಾಲೆ, ನಮ್ಮ ಶಾಲೆ ಎಂದು ಭಾವಿಸಬೇಕು ಎಂದು ಹೇಳಿದರು. ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಹಣ ವಿನಿಯೋಗಿಸುತ್ತಿದೆ. ಈ ಹಣದ ಸದುಪಯೋಗವಾಗ ಬೇಕೆಂದು ತಿಳಿಸಿದರು. ತಾಲೂಕು ಪಂಚಾಯ್ತಿ ಸದಸ್ಯ ಹನುಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್, ಗ್ರಾಪಂ ಸದಸ್ಯರು, ಮುಖ್ಯ ಶಿಕ್ಷಕ ಪಿ.ಮಲ್ಲಯ್ಯ ಗ್ರಾಮಸ್ಥರು ಇದ್ದರು.