ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ವಿದ್ಯಾರ್ಥಿಗಳಿಗೆ ಪುರಸ್ಕಾರ

Vishwanath S
Updated On : 20 Aug 2013, 12:13 pm

ಕ.ಪ್ರ.ವಾರ್ತೆ ,  ಅರಸೀಕೆರೆ ,  ಆ.19
ವಿದ್ಯಾರ್ಥಿಗಳು ತಾಳ್ಮೆ, ಸಹನೆ, ಸಮಯ ಪರಿಪಾಲನೆ, ಶಿಸ್ತಿನಿಂದ ಪ್ರಾಥಮಿಕ ಹಂತದಲ್ಲಿಯೇ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿದರೆ ಸಮಾಜ, ಸಂಘ ಸಂಸ್ಥೆಗಳು ಗೌರವಿಸುತ್ತವೆ ಎಂಬುದಕ್ಕೆ ಈ ಸಮಾರಂಭವೇ ಸಾಕ್ಷಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಅಭಿಪ್ರಾಯಪಟ್ಟರು.
ಪಟ್ಟಣದ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅನ್ಯ ಚಟುವಟಿಕೆಗಳತ್ತ ಗಮನ ಹರಿಸದೆ ಓದಿನತ್ತ ಗಮನ ನೀಡುವ ಮೂಲಕ ಪ್ರತಿಯೊಬ್ಬರೂ ಪ್ರತಿಭಾವಂತರಾಗಿ ರೂಪುಗೊಂಡು ತಮ್ಮ ಪೋಷಕರಿಗೆ ಹಾಗೂ ತಾವು ಕಲಿತ ಸಂಸ್ಥೆಗೆ ಉತ್ತಮ ಹೆಸರು ಗಳಿಸಿಕೊಡ ಬೇಕೆಂದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬ್ಯಾಂಕ್ ಕೈಗೊಂಡಿರುವ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗಲಿ. ಹಾಗೆಯೇ ಇವುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
 ಎಚ್‌ಡಿಎಫ್‌ಸಿ ಬ್ಯಾಂಕ್ ವ್ಯವಸ್ಥಾಪಕ ಎಚ್.ಬಿ. ನಿರಂಜನ್ ಶ್ರದ್ಧೆ ಮತ್ತು ಆಸಕ್ತಿಯಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ  ತೊಡಗಿಸಿಕೊಂಡರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೀಘ್ರದಲ್ಲಿಯೇ ಶೈಕ್ಷಣಿಕ ಸಾಲ ಯೋಜನೆ ಒದಗಿಸುವ ಉದ್ದೇಶ ಹೊಂದಲಾಗಿದೆ. ಈವರೆಗೆ ವಾಹನ, ಮನೆ ಖರೀದಿ, ಇತ್ಯಾದಿ ಬಗೆಯ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ ಗ್ರಾಮಾಂತರ ವಿದ್ಯಾರ್ಥಿಗಳಿಗೂ ಹೊಸ ಯೋಜನೆ ರೂಪಿಸಲಾಗುತ್ತಿದೆ. ಇದರ ಸೌಲಭ್ಯ ಪಡೆದು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು. ಹಾಗೆಯೇ ಇತರರಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ ಎಂದು ತಿಳಿಸಿದರು.
ಉದ್ಯಮಿ ಅರುಣಕುಮಾರ್, ನಂಜುಂಡಪ್ಪ ಮಾತನಾಡಿ ಬ್ಯಾಂಕುಗಳೆಂದರೆ ಕೇವಲ ಹಣಕಾಸು ವ್ಯವಹಾರಕ್ಕೆ ಮಾತ್ರ ಸೀಮಿತವಾಗಿದ್ದು, ಅದಕ್ಕೆ ಅಪವಾದವೆಂಬಂತೆ ಎಚ್‌ಡಿಎಫ್‌ಸಿ ಬ್ಯಾಂಕ್ ವ್ಯವಹಾರದೊಂದಿಗೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವಂತಹ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಸಂಗತಿ ಎಂದು ಹೇಳಿದರು. ಇದೇ ವೇಳೆ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ, ನೆನಪಿನ ಕಾಣಿಕೆ ವಿತರಿಸಿ ಗೌರವಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement