ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹದಗೆಟ್ಟ ರಸ್ತೆ: ವಾಹನ ಸಂಚಾರಕ್ಕೆ ಪರದಾಟ

Vishwanath S
Updated On : 20 Aug 2013, 12:14 pm

ಕ.ಪ್ರ.ವಾರ್ತೆ ,  ಅರಸೀಕೆರೆ ,  ಆ.19
ಪಟ್ಟಣದಿಂದ ಹಾಸನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬೋರನಕೊಪ್ಪಲು ಹಾರನಹಳ್ಳಿ ನಡುವಿನ ಮಾರ್ಗ ತೀವ್ರ ಹದಗೆಟ್ಟಿದ್ದು ವಾಹನ ಸವಾರರು, ಪಾದಚಾರಿಗಳು ಸಂಚರಿಸಲು ದುಸ್ಥರವಾಗಿದ್ದು ಪ್ರಯಾಣಿಕರು ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಇಲಾಖೆ ವಿರುದ್ಧ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಬೋರನಕೊಪ್ಪಲಿನಿಂದ ಯಳವಾರೆಯವರೆಗೂ ರಸ್ತೆ ದುರಸ್ಥಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಈವರೆಗೂ ಗುತ್ತಿಗೆದಾರರು ರಸ್ತೆ ನಿರ್ಮಾಣಕ್ಕೆ ಮುಂದಾಗಿಲ್ಲ. ಬದಲಾಗಿ ಇರುವ ರಸ್ತೆಯನ್ನೇ ಹಾಳುಗೆಡವಿದ್ದು ಮಳೆ ಬಂದ ವೇಳೆ ಪ್ರಯಾಣಿಸಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಈ ರಸ್ತೆಯಲ್ಲಿ ಈಗಾಗಲೇ ಹಲವಾರು ಅಪಘಾತಗಳು ಸಂಭವಿಸಿವೆ. ಪರಿಸ್ಥಿತಿ ಹೀಗಿದ್ದರೂ ಜನಪ್ರತಿನಿಧಿಗಳಾಗಲಿ ಅಥವಾ ಗುತ್ತಿಗೆದಾರರಾಗಲಿ ಇತ್ತ ತಲೆ ಹಾಕದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ರಸ್ತೆ ದುರಸ್ಥಿಗೆ ಕೆಂಪು ಮಣ್ಣು ಹಾಕಿರುವ ಪರಿಣಾಮ ವಾಹನಗಳು ಸರಾಗವಾಗಿ ಚಲಿಸಲು ಸಾಧ್ಯವಾಗುತ್ತಿಲ್ಲ. ದ್ವಿಚಕ್ರ ವಾಹನ ಸವಾರರ ಪಾಡಂತೂ ಹೇಳತೀರದಾಗಿದೆ. 2-3 ದಿನಗಳ ಹಿಂದಷ್ಟೇ ರಾಜ್ಯ ರಸ್ತೆ ಸಾರಿಗೆ  ಬಸ್ ಅಪಘಾತಕ್ಕೀಡಾ ಬೇಕಿತ್ತು. ಚಾಲಕನ ಜಾಗರೂಕತೆಯಿಂದ ಯಾವುದೇ ಅವಘಡ ಸಂಭವಿಸಲಿಲ್ಲ. ಸಂಬಂಧಿಸಿದ ಇಲಾಖೆಯವರು ಇನ್ನಾದರೂ ಇತ್ತ ಗಮನ ಹರಿಸಿ ಹದಗೆಟ್ಟಿರುವ ರಸ್ತೆಯನ್ನು ದುರಸ್ತಿಗೊಳಿಸಬೇಕು. ಇಲ್ಲದಿದ್ದಲ್ಲಿ ಲೋಕೋಪಯೋಗಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಪ್ರಯಾಣಿಕರು ಹಾಗೂ ಗ್ರಾಮಸ್ಥರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement