ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಬ್ಯಾಂಕ್ ಖಾತೆಯೊಂದಿಗೆ ಆಧಾರ್ ನಂಬರ್ ಸೇರಿಸಿ'

Srinivasa Murthy VN
Updated On : 22 Aug 2013, 10:07 am

ಕ.ಪ್ರ.ವಾರ್ತೆ ಹಾಸನ ಆ.22
ಸರ್ಕಾರ ನಗದು ರೂಪದಲ್ಲಿ ನೀಡುವ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುವಂತೆ ಜನತೆ ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡಿಸುವಂತೆ ಎಸ್‌ಬಿಐ ಮುಖ್ಯ ವ್ಯವಸ್ಥಾಪಕ  ಶಂಕರ್‌ರಾವ್ ತಿಳಿಸಿದ್ದಾರೆ.
ಕ್ಷೇತ್ರ ಪ್ರಚಾರ ನಿರ್ದೇಶನಾಲಯ ವತಿಯಿಂದ  ತಾಲೂಕಿನ ಯಡಿಯೂರಿನಲ್ಲಿ ಬುಧವಾರ ಹಮಿಕೊಳ್ಳಲಾಗಿದ್ದ ನಾನಾ ಯೋಜನೆಗಳ ವಿಶೇಷ ಪ್ರಚಾರಾಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಸರ್ಕಾರ ಬ್ಯಾಂಕ್ ಮೂಲಕ ಬಟವಾಡೆ ಮಾಡಲು ಮುಂದಾಗಿದ್ದು, ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆಗೆ ತೀರ್ಮಾನಿಸಿದೆ ಎಂದ ಅವರು, ಗ್ರಾಮೀಣ ಭಾಗದ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಹರಳಹಳ್ಳಿ ಗ್ರಾಮ ಪಂಚಾಯ್ತಿ ಲೆಕ್ಕ ಸಹಾಯಕ ಮಂಜುನಾಥ್ ಮಾತನಾಡಿ, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಜಾಬ್‌ಕಾರ್ಡ್ ಪಡೆದು ತಮ್ಮ ಗ್ರಾಮದ ರಸ್ತೆ, ಚರಂಡಿ ಇತ್ಯಾದಿ ನಿರ್ಮಿಸಿಕೊಳ್ಳುವಂತೆ ತಿಳಿಸಿ, ಈ ಯೋಜನೆಯಡಿ ಶೌಚಾಲಯ ನಿರ್ಮಾಣಕ್ಕೆ 9 ಸಾವಿರ ರು. ನೀಡಲಾಗುವುದು ಎಂದು ಹೇಳಿದರು.
ಎಸ್‌ಬಿಐ ವ್ಯವಸ್ಥಾಪಕ ದಿನೇಶ್, ಮಲ್ಲಿಕಾರ್ಜುನ್, ಗ್ರಾಮ ಪಂಚಾಯ್ತಿ ಸದಸ್ಯೆ ವಸಂತ, ಜೀವನಧಾರ ಸೇವಾ ಕೇಂದ್ರದ ನಿರ್ದೇಶಕಿ  ಸಿಸ್ಟರ್ ಬನ್ನಿ ಇತರರು ಇದ್ದರು. ಕಾರ್ಯಕ್ರಮ ಸಂಯೋಜಕ ಪ್ರಕಾಶ್ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement