ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ತಾ.ಪಂ ಅಧ್ಯಕ್ಷ ಸ್ಥಾನಕ್ಕೆ 28 ರಂದು ಚುನಾವಣೆ

Vishwanath S
Updated On : 24 Aug 2013, 1:19 am

ಚನ್ನಪಟ್ಟಣ: ಶಾಂತಮ್ಮ ರಾಜಿನಾಮೆಯಿಂದ ತೆರವಾಗಿರುವ ತಾ.ಪಂ ಅಧ್ಯಕ್ಷ ಸ್ಥಾನಕ್ಕೆ ಆ.28 ರಂದು ಚುನಾವಣೆ ನಡೆಯಲಿದೆ. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ತಾ.ಪಂ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್‌ನ ಮೂವರು ಸದಸ್ಯರಿಗೆ ಹಂಚಿಕೆ ಮಾಡಿದ್ದು, ಒಪ್ಪಂದದಂತೆ ರಾಜಿನಾಮೆ ನೀಡಲು ಶಾಂತಮ್ಮ ಮೀನಾಮೇಷ ಏಣಿಸಿದ ಹಿನ್ನೆಲೆಯಲ್ಲಿ ಜೆಡಿಎಸ್ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಅವಿಶ್ವಾಸ ಗೊತ್ತುವಳಿಯಲ್ಲಿ ಸೋಲಾಗುವುದೆಂದು ಮನವರಿಕೆಯಾದ ಹಿನ್ನೆಲೆಯಲ್ಲಿ ಶಾಂತಮ್ಮ ಮಹೇಶ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಜು. 17ರಂದು ಅಂಗೀಕಾರಗೊಂಡಿತ್ತು. ಲೋಕಸಭಾ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಆ.28ಕ್ಕೆ ಚುನಾವಣೆ ನಿಗದಿಪಡಿಸಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement