ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪದಾಧಿಕಾರಿಗಳು ನೌಕರರ ಹಿತ ಕಾಯಿರಿ: ಶಾಸಕ

Vishwanath S
Updated On : 26 Aug 2013, 12:20 pm

ಕ.ಪ್ರ. ವಾರ್ತ್ಣೆ ಆಲೂರು ಆ. 25
ಸರ್ಕಾರಿ ಸಂಘದ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ನೌಕರರ ಹಿತ ಕಾಯುವಂತೆ ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ಅವರು ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ 6 ಲಕ್ಷದ 25 ಸಾವಿರ ಶಿಕ್ಷಕರ ಹುದ್ದೆಗಳಲ್ಲಿ 4 ಲಕ್ಷ ನೇಮಕಾತಿಯಾಗಿದ್ದು,  2 ಲಕ್ಷ ಹುದ್ದೆಗಳು ಖಾಲಿ ಇವೆ, ಶಿಕ್ಷಣ ಇಲಾಖೆಯಲ್ಲದೆ ಎಲ್ಲಾ ಇಲಾಖೆಗಳಲ್ಲೂ ಹುದ್ದೆಗಳು ಖಾಲಿ ಇದೆಯೆಂದರು.
ಮೊದಲಿಗೆ ಹೋಲಿಸಿದರೆ ಈಗ ಶಿಕ್ಷಣ ಪಡೆಯುವವರ ಸಂಖ್ಯೆ ಹೆಚ್ಚಾಗಿದ್ದು ಪ್ರಸ್ತುತ ಖಾಲಿ ಇರುವ ಹುದ್ದೆಗಳ ಲಾಭ ಪಡೆಯಬೇಕೆಂದ ಅವರು ಜನಸೇವೆಗೆ ಸಂಘದ ಅವಶ್ಯಕತೆಯಿದ್ದು, ಎಲ್ಲಾ ಇಲಾಖೆಯ ನೌಕರರ ಶ್ರೇಯೋಭಿವೃಧ್ದಿಗೆ ಶ್ರಮಿಸಬೇಕೆಂದು ತಾಲೂಕು ನೌಕರರ ಸಂಘದ ನೂತನ ಅಧ್ಯಕ್ಷರಿಗೆ ಕಿವಿಮಾತು ಹೇಳಿದರು.
ನೂತನ ಅಧ್ಯಕ್ಷ ವರದರಾಜು ಮಾತನಾಡಿ, ಸರ್ಕಾರಿ ನೌಕರರಿಗೆ ಬಹಳಷ್ಟು ಸಮಸ್ಯೆಗಳಿವೆ, ಇತ್ತೀಚೆಗೆ ಕೆಲಸ ಮಾಡುವುದೇ ದುಸ್ತರವಾಗುತ್ತಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಬಿ.ಪಿ.ಮಂಜುನಾಥ್ ಮಾತನಾಡಿ, ಸಮಾಜದ ಪರಿವರ್ತನೆ ಶಿಕ್ಷಕನಿಂದ ಶುರುವಾಗುತ್ತದೆ. ಪ್ರತಿ ಹಳ್ಳಿಗಳಲ್ಲಿ ಶಾಲೆಗಳನ್ನು ತೆರೆದಿದ್ದು ಶಿಕ್ಷಕ ವೃಂದ ಉತ್ತಮವಾಗಿ ಕಾರ್ಯ ನಿರ್ವಹಿಸಿದರೆ ದೇಶಕ್ಕೆ ಒಳ್ಳೆಯ ಕೊಡುಗೆ ನೀಡಬಹುದು ಎಂದರು.
ಶಾಸಕರು ಸೇರಿದಂತೆ ನೌಕರರ ಸಂಘದ ಹಲವು ಪದಾಧಿಕಾರಿಗಳಿಗೆ ಸನ್ಮಾನ ಮಾಡಲಾಯಿತು.
ಉಪ ತಹಸೀಲ್ದಾರ್ ಸುಬ್ಬಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಲಾಂ ಸತ್ತಾರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement